ದಾವಣಗೆರೆ ಜಿಲ್ಲೆಯ ಎಲ್ಲಾ ಪೊಲಿಸ್ ಠಾಣೆಗಳಿಗೆ ಎಸ್ಪಿ ರಿಷ್ಯಂತ್ ರೌಂಡ್ಸ್
![sp_ryshyanth_rounds_at_Davanagere_police_station[1]](https://garudavoice.com/wp-content/uploads/2021/06/sp_ryshyanth_rounds_at_Davanagere_police_station1.jpg)
ದಾವಣಗೆರೆ : ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ. ಬಿ. ರಿಷ್ಯಂತ್ ಅವರು ಜಗಳೂರು ತಾಲ್ಲೂಕಿನ ಬಿಳಿಚೋಡು ಠಾಣೆ, ಅಣಜಿ ಉಪಠಾಣೆ, ಮಾಯಕೊಂಡ ಠಾಣೆ, ಹದಡಿ ಠಾಣೆ ಗಳು ಮತ್ತು ಪೊಲೀಸ್ ವಸತಿ ಗೃಹಗಳಿಗೆ ಭೇಟಿ ಮಾಡಿ ಪರಿಶೀಲಿಸಿದರು ಹಾಗೂ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕರ್ತವ್ಯಗಳ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿದರು. ಅಧಿಕಾರಿ ಸಿಬ್ಬಂದಿಗಳ ಕುಂದುಕೊರತೆಗಳ ಬಗ್ಗೆ ವಿಚಾರಿಸಿದರು. ಮಾಳಗೊಂಡನಹಳ್ಳಿ ಚೆಕ್ ಪೋಸ್ಟ್ ಗೆ ಭೇಟಿ ಪರಿಶೀಲಿಸಿ ಸೂಕ್ತ ಸೂಚನೆಗಳನ್ನು ನೀಡಿದರು. ಈ ವೇಳೆ ಗ್ರಾಮಾಂತರ ಉಪವಿಭಾಗದ ಡಿವೈಎಸ್ಪಿ ನರಸಿಂಹ ವಿ.ತಾಮ್ರಧ್ವಜ, ಪೊಲೀಸ್ ನಿರೀಕ್ಷಕರಾದ ಮಂಜುನಾಥ ಪಂಡಿತ್ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.