ವಯೋ ನಿವೃತ್ತಿ ಹೊಂದಿದ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಬೀಳ್ಕೊಡುಗೆ ನೆರವೇರಿಸಿದ ಎಸ್ ಪಿ ಉಮಾ ಪ್ರಶಾಂತ್
ದಾವಣಗೆರೆ: ಪೊಲೀಸ್ ಇಲಾಖೆಯಲ್ಲಿ ಸುಧೀರ್ಘ ಸೇವೆ ಸಲ್ಲಿಸಿ ಇಂದು ವಯೋ ನಿವೃತ್ತಿ ಹೊಂದಿದ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ವಯೋ ನಿವೃತ್ತಿ ಹೊಂದಿದ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಶ್ರೀ ಚಂದ್ರು, ಡಿಎಆರ್ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಆರ್ ಎಸ್ ಐ ಶ್ರೀ ಆರ್ ಮಂಜಪ್ಪ ರೆಡ್ಡಿ, ಬಡಾವಣೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಶ್ರೀ ಜೆ ಶಿವಪ್ಪ ರವರನ್ನು ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು ಜಿಲ್ಲಾ ಪೊಲೀಸ್ ವತಿಯಿಂದ ಸನ್ಮಾನಿಸಿ, ಸದರಿಯವರ ನಿವೃತ್ತಿ ಜೀವನಕ್ಕೆ ಶುಭಕೋರಿ ಬೀಳ್ಕೊಟ್ಟರು.
ಈ ಸಂಧರ್ಭದಲ್ಲಿ ಜಿಲ್ಲಾ ಪೊಲೀಸ್ ಕಛೇರಿಯ ಸಹಾಯಕ ಆಡಳಿತಾಧಿಕಾರಿಯಾದ ಶ್ರೀ ಮೆಹಬೂಬ್ ಎ ರವರು ಹಾಗೂ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಮತ್ತು ನಿವೃತ್ತರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.