ಸ್ಪೀಕರ್ ಯು.ಟಿ. ಖಾದರ್ ಅವರಿಗೆ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ
ಬೆಂಗಳೂರು: ಸರಳ ವ್ಯಕ್ತಿತ್ವದ ರಾಜಕಾರಣಿ ಎಂದೇ ಗುರುತಾಗಿರುವ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಪ್ರತಿಷ್ಠಿತ “ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಸಿಗಲಿದೆ. ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟಲೆಕ್ಚುವಲ್ಸ್ ವತಿಯಿಂದ ನೀಡಲಾಗುವ ಈ ಪ್ರಶಸ್ತಿಗೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.
ದಿಲ್ಲಿಯ ಇಂಡಿಯಾ ಇಂಟರ್ ನ್ಯಾಶನಲ್ ಸೆಂಟರ್ ನಲ್ಲಿ ಭಾನುವಾರ ನಡೆಯುವ ಸಮಾರಂಭದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ, ನಿವೃತಿ ನ್ಯಾಯಮೂರ್ತಿ ವಿ.ಗೋಪಾಲ ಗೌಡ ಸಹಿತ ಗಣ್ಯರ ಸಮ್ಮುಖದಲ್ಲಿ ಯು.ಟಿ. ಖಾದರ್ ಅವರು ಈ ಪ್ರಶಸ್ತಿಯನ್ನು ಪಡೆಯಲಿದ್ದಾರೆ.