sports; ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ, ಆ. 19: ಪ್ರಸಕ್ತ ಸಾಲಿನ ಕ್ರೀಡಾ ಇಲಾಖೆಯಿಂದ  ಪರಿಶಿಷ್ಠ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ 2022ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ (sports) ಪದಕ ವಿಜೇತರಾದ ಪ.ಜಾ ಹಾಗೂ ಪ.ಪಂ ಕ್ರೀಡಾಪಟುಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ (application) ಆಹ್ವಾನಿಸಲಾಗಿದೆ.

ಅರ್ಹ ಕ್ರೀಡಾಪಟುಗಳು ಅರ್ಜಿ ನಮೂನೆಯನ್ನು ಜಿಲ್ಲಾ ಕ್ರೀಡಾಂಗಣದಲ್ಲಿರುವ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು ಸಲ್ಲಿಸಬೇಕು.

application; ಗ್ರೇಡ್ ಸಿ ಮತ್ತು ಡಿ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 5 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ, 08192 237480 ಸಂಪರ್ಕಿಸಲು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!