ಶ್ರೀಭಗವಾನ್ ಮಹಾವೀರ ಜಯಂತಿ ಸರಳ ಆಚರಣೆ
ದಾವಣಗೆರೆ : ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಗವಾನ್ ಮಹಾವೀರ ಜಯಂತಿಯನಗನು ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಭಗವಾನ್ ಮಹಾವೀರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಪುಷ್ಪಾರ್ಚನೆ ಶ್ರದ್ದಾ ಹಾಗೂ ಭಕ್ತಿಪೂರ್ವಕವಾಗಿ ನಮಿಸಿದರು.
ವಿಧಾನಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿ ಇರುವುದರಿಂದ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಹಿಟ್ನಾಳ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ಸಮಾಜದ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ರವಿ, ಶ್ವೇತಾಂಬರ ಜೈನ್ ಸಂಘದ ಅಧ್ಯಕ್ಷ ಅಜಿತ ಬಿ.ಎಸ್, ಉಪಾಧ್ಯಕ್ಷ ನರೇಂದ್ರ ಕುಮಾರ್, ಕಾರ್ಯದರ್ಶಿ ಸುನೀಲ್ ಕುಮಾರ್ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.