ಶ್ರೀನಿವಾಸ ನಾಯಕ್ ಇಂದಾಜೆ ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ

ಶ್ರೀನಿವಾಸ ನಾಯಕ್ ಇಂದಾಜೆ ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ

ಬೆಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗು ಹಿರಿಯ ಪತ್ರಕರ್ತ ಶ್ರೀನಿವಾಸ ‌ನಾಯಕ್ ಇಂದಾಜೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಯನ್ನು ಸೋಮವಾರ ಸ್ವೀಕರಿಸಿದರು. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.


ಕಂದಾಯ ಸಚಿವ ಆರ್.ಅಶೋಕ್, ಮಾಧ್ಯಮ ಅಕಾಡೆಮಿಯ ಅಧ್ಯಕ್ಷ ಸದಾಶಿವ ಶೆಣೈ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಉಪಸ್ಥಿತರಿದ್ದರು.
ಶ್ರೀನಿವಾಸ ನಾಯಕ್‌ ಇಂದಾಜೆ ಅವರನ್ನು ಮಾಧ್ಯಮ ಅಕಾಡೆಮಿಯ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಳೆದ ಎರಡು ದಶಕಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿರುವ ಶ್ರೀನಿವಾಸ‌ ನಾಯಕ್ ಇಂದಾಜೆ ಉದಯ ಟಿವಿ ಸೇರಿದಂತೆ ಹಲವು ರಾಜ್ಯ ಹಾಗು ರಾಷ್ಟ್ರೀಯ ವಾಹಿನಿಗಳ ವರದಿಗಾರರಾಗಿ ಕಾರ್ಯ ನಿರ್ವಹಿಸಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿರುವ ಅವರು ಸಂಘದ ಮೂಲಕ ಗ್ರಾಮ ವಾಸ್ತವ್ಯ, ಬ್ರಾಂಡ್ ಮಂಗಳೂರು ಕಾರ್ಯಕ್ರಮ ಸೇರಿದಂತೆ ಹಲವಾರು ಸಮಾಜಮುಖಿ ಚಟುವಟಿಕೆಗಳ ಮೂಲಕ ಗಮನ ಸೆಳೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!