ಎಸ್.ಎಸ್. ಬಡಾವಣೆಯಲ್ಲಿ ಮಹಿಳೆಯರ ಜೊತೆ ಸಂವಾದ ನಡೆಸಿ ಕ್ಷೇತ್ರದ ಅಭಿವೃದ್ಧಿಗೆ ಮತಯಾಚಿಸಿದ ಡಾ. ಪ್ರಭಾ ಮಲ್ಲಿಕಾರ್ಜುನ.
ದಾವಣಗೆರೆ: ಎಸ್.ಎಸ್ ಬಡಾವಣೆಯ ಮಹಿಳೆಯರ ಜೊತೆ ಸಂವಾದ ನಡೆಸಿದ ಡಾ. ಪ್ರಭಾ ಮಲ್ಲಿಕಾರ್ಜುನ್ ಈ ಬಡಾವಣೆಗಳಲ್ಲಿ ಎಸ್.ಎಸ್ ಮಲ್ಲಿಕಾರ್ಜುನ ಅತಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ತಾವುಗಳು ಆ ಅಭಿವೃದ್ಧಿ ಕಾರ್ಯಗಳಿಗೆ ಮತ ನೀಡುವ ಮೂಲಕ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯ ಮಾಡಲು ಬೆಂಬಲವಾಗಿ ನಿಲ್ಲಬೇಕು ಎಂದು ವಿನಂತಿಸಿದರು.
ಮಾಜಿ ಪಾಲಿಕೆ ಸದಸ್ಯರಾದ ಶಿವನಹಳ್ಳಿ ರಮೇಶ್ ಮಾತನಾಡಿ 1999 ರಿಂದ 2018ರವರೆಗೆ ದಾವಣಗೆರೆ ಅಭಿವೃದ್ಧಿಗೆ ಎಸ್.ಎಸ್ ಮಲ್ಲಿಕಾರ್ಜುನ್ ಕೈಕೊಂಡ ಒಂದೊಂದು ಕಾರ್ಯಕ್ರಮಗಳನ್ನು ಸಂಕ್ಷಿಪ್ತವಾಗಿ ನೆರೆದಿದ್ದ ಎಲ್ಲರಿಗೂ ವಿವರಿಸಿದ್ದು ವಿಶೇಷವಾಗಿತ್ತು.