4 ಬಾರಿ ಶಾಸಕರಾಗಿ 3ನೇ ಬಾರಿಗೆ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್

4 ಬಾರಿ ಶಾಸಕರಾಗಿ 3ನೇ ಬಾರಿಗೆ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್

ದಾವಣಗೆರೆ: ಈ ಹಿಂದೆ ಯುವಜನ ಸೇವೆ, ಕ್ರೀಡೆ, ತೋಟಗಾರಿಕೆ, ಕೃಷಿ ಮಾರುಕಟ್ಟೆ ಸಚಿವರಾಗಿ ಕಾರ್ಯ ನಿರ್ವಹಿಸಿದ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಇದೀಗ ಮತ್ತೆ ಸಚಿವ ಸ್ಥಾನ ಒಲಿದು ಬಂದಿದೆ.

56 ವರ್ಷದ ಮಲ್ಲಿಕಾರ್ಜುನ್, ಬಿಕಾಂ ಪದವೀಧರರು. ಈ ಬಾರಿ ಅವರು ಗಣಿ ಹಾಗೂ ತೋಟಗಾರಿಕೆ ಸಚಿವರಾಗಲಿದ್ದಾರೆ. 1998ರಲ್ಲಿ ಶಾಮನೂರು ಶಿವಶಂಕರಪ್ಪ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಲೋಕಸಭೆಗೆ ಸ್ಪರ್ಧಿಸಿದ್ದರು. ಆ ವೇಳೆ ಅವರ ಪುತ್ರ ಎಸ್‌.ಎಸ್‌. ಮಲ್ಲಿಕಾರ್ಜುನ್ ಅವರನ್ನು ಕಣಕ್ಕೆ ಇಳಿಸಲಾಯಿತು. ಈ ಉಪ ಚುನಾವಣೆಯಲ್ಲಿ ಗೆಲ್ಲುವುದರೊಂದಿಗೆ ಮಲ್ಲಿಕಾರ್ಜುನ್ ವಿಧಾನಸಭೆ ಪ್ರವೇಶಿಸಿದರು. ಆರಂಭವಾಯಿತು.

ಇದಾದ ಒಂದು ವರ್ಷಗಳ ಬಳಿಕ 1999ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಮತ್ತೆ ಗೆದ್ದು ಎಸ್‌.ಎಂ. ಕೃಷ್ಣ ಸರ್ಕಾರದಲ್ಲಿ ಯುವಜನ ಸೇವೆ ಹಾಗೂ ಕ್ರೀಡಾ ಸಚಿವರಾದರು. ಆ ಬಳಿಕ 2004, 2009, 2014ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದರು.

2013ರ ವಿಧಾನಸಭಾ ಚುನಾವಣೆಯಲ್ಲಿ ವಿಜೇತರಾಗಿ ಸಿದ್ದರಾಮಯ್ಯ ಸರ್ಕಾರದಲ್ಲಿ ತೋಟಗಾರಿಕೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದರು. ಈ ವೇಳೆ ದಾವಣಗೆರೆಯಲ್ಲಿ ಗಾಜಿನ ಮನೆ, ಕುಂದವಾಡ ಕೆರೆ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಬಳಿಕ 2023ರ ಚುನಾವಣೆಯಲ್ಲಿ ವಿಜೇತರಾಗಿ ಮತ್ತೊಮ್ಮೆ ಸಚಿವ ಸ್ಥಾನ ಅಲಂಕರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!