karnataka rajyotsava; ನಾಡಿನ ಭವ್ಯ ಸಂಸ್ಕೃತಿ, ಪರಂಪರೆ ಯುವ ಜನತೆಗೆ ಮನನವಾಗಲಿ; ಎಸ್.ಎಸ್.ಮಲ್ಲಿಕಾರ್ಜುನ್

ದಾವಣಗೆರೆ, ನ.01: ಕರ್ನಾಟಕ ಎಂದು ಪುನರ್ ನಾಮಕರಣ ಹೊಂದಿ 50 ವರ್ಷಗಳಾಗುತ್ತಿದ್ದು ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ, ನಾಡಿನ ಭವ್ಯವಾಅದ ಇತಿಹಾಸ ಮತ್ತು ಸಂಸ್ಕೃತಿ, ಪರಂಪರೆಯನ್ನು ಯುವ ಜನತೆಗೆ ಮನನ ಮಾಡಿಕೊಡುವುದು ಇಂದಿನ ಅತ್ಯಗತ್ಯ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು.

ಅವರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 68 ನೇ ಕರ್ನಾಟಕ ರಾಜ್ಯೋತ್ಸವ (karnataka rajyotsava) ಕಾರ್ಯಕ್ರಮದಲ್ಲಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಪಥಸಂಚನದಲ್ಲಿ ಗೌರವ ವಂದನೆ ಸ್ವೀಕರಿಸಿ ತಮ್ಮ ರಾಜ್ಯೋತ್ಸವ ಸಂದೇಶದಲ್ಲಿ ತಿಳಿಸಿದರು.

ಕರ್ನಾಟಕ ರಾಜ್ಯೋತ್ಸವ ಕನ್ನಡಿಗರ ಹಬ್ಬ, ಇದನ್ನು ನಮ್ಮ ನಾಡು, ನುಡಿಯ ಹಿರಿಮೆ ಗರಿಮೆಗಳನ್ನು ಮನನ ಮಾಡಿಕೊಳ್ಳುವ ಪರಿ ಎಂದರೂ ತಪ್ಪಾಗಲಾರದು. ಇತಿಹಾಸ ಅರಿತವನು ಮಾತ್ರ ಇತಿಹಾಸವನ್ನು ನಿರ್ಮಿಸಲು ಸಾಧ್ಯ ಎಂಬ ಮಾತಿನಂತೆ, ನಮ್ಮ ನಾಡಿನ ಭವ್ಯವಾದ ಇತಿಹಾಸವನ್ನು ಮನನ ಮಾಡಿಕೊಡುವುದು ಈ ಸಂದರ್ಭದಲ್ಲಿ ಬಹು ಮುಖ್ಯವಾಗಿದೆ.   ಕನ್ನಡ ಭಾಷೆ, ಕರ್ನಾಟಕದ ಉಗಮದ ಇತಿಹಾಸದತ್ತ ಕಣ್ಣಾಯಿಸಿದರೆ ಕನ್ನಡಿಗರದು ಸುಮಾರು ಎರಡುವರೆ ಸಾವಿರ ವರ್ಷಗಳ ಭವ್ಯ ಇತಿಹಾಸವಿದೆ. ಕ್ರಿ.ಪೂ.3ನೇ ಶತಮಾನದ ಸಾಮ್ರಾಟ ಅಶೋಕನ ಶಿಲಾಶಾಸನಗಳಲ್ಲಿ ಕನ್ನಡ ಪದಗಳ ಬಳಕೆಯು ಕಾಣಸಿಗುತ್ತದೆ. ನಂತರ ಶಾತವಾಹನರ ಆಳ್ವಿಕೆಯ ಕಾಲದಲ್ಲಿಯೂ ಕನ್ನಡ ಭಾಷೆಯ ಬಳಕೆಯನ್ನು ಕಾಣಬಹುದು ಎಂದು ಹೇಳಿದರು.  ಕನ್ನಡ ಭಾಷೆ, ಸಂಸ್ಕೃತಿಯ ರಕ್ಷಣೆಗೆ ನೈತಿಕ ಶಕ್ತಿಯನ್ನು ತುಂಬಿ ಕರ್ತವ್ಯ ನಿರ್ವಹಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗಿದೆ. ಒಂದರಿಂದ ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮತ್ತು ಉದ್ಯೋಗವಕಾಶಗಳಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಜಾರಿಗೆ ತಂದಿರುವ ರಾಜ್ಯ ನಮ್ಮ ಕರ್ನಾಟಕ ರಾಜ್ಯ ಎಂದು ಹರ್ಷ ವ್ಯಕ್ಯ ಪಡಿಸಿದರು.

ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್: ಸಿದ್ದರಾಮಯ್ಯ ಘೋಷಣೆ         

ಸಮಾರಂಭದಲ್ಲಿ ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಪಾಲಿಕೆ ಮೇಯರ್ ಬಿ.ಹೆಚ್.ವಿನಾಯಕ ಪೈಲ್ವಾನ್, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕ ಕೆ.ತ್ಯಾಗರಾಜನ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಇಟ್ನಾಳ್ ಉಪಸ್ಥಿತರಿದ್ದರು.

ಆಕರ್ಷಕ ಪಥ ಸಂಚಲನ: ಒಟ್ಟು 14 ವಿವಿಧ ತುಕಡಿಗಳು ಶಿಸ್ತಿನ ಮತ್ತು ಆಕರ್ಷಕ ಪಥ ಸಂಚಲನದಲ್ಲಿ ಪಾಲ್ಗೊಂಡವು.

ಸಾಧಕರಿಗೆ ಸನ್ಮಾನ ಕಾರ್ಯಕ್ರಮ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಆಯ್ಕೆ ಮಾಡಿದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 50 ಗಣ್ಯರನ್ನು ಇದೇ ಸಂದರ್ಭದಲ್ಲಿ ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಕಣ್ಮನ ಸಳೆದ ಸಾಂಸ್ಕøತಿಕ ನೃತ್ಯ:  ನಗರದ ಗೋಲ್ಡಾನ್ ಪಬ್ಲಿಕ್ ಶಾಲೆ, ಬಾಪೂಜಿ ಪಬ್ಲಿಕ್ ಶಾಲೆ ಹಾಗೂ ಸೆಂಟ್ ಜಾನ್ಸ್ ಶಾಲೆಯ ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಕನ್ನಡ ಹಾಡುಗಳಿಗೆ ಹೆಜ್ಜೆ ಹಾಕಿದರು.

ಮೆರವಣಿಗೆ;  ಬೆಳಿಗ್ಗೆ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಅವರು, ಕನ್ನಡತಾಯಿ ಭುವನೇಶ್ವರಿ ಮೂರ್ತಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಕಲಾ ತಂಡಗಳೊಂದಿಗೆ ವಿವಿಧ ಸ್ತಬ್ದ ಚಿತ್ರಗಳೊಂದಿಗೆ ಮೆರವಣಿಗೆಗೆ ಚಾಲನೆ ನೀಡಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!