ಹೊಟ್ಯಾಪುರ ಹಿರೇಮಠದ ಸ್ವಾಮಿಗಳ ನಿಧನಕ್ಕೆ ಎಸ್ ಎಸ್- ಎಸ್ ಎಸ್ ಎಂ ಸಂತಾಪ

ರಾಹುಲ್‌ಗಾಂಧಿ ಪ್ರಕರಣ ಸುಪ್ರೀಂ ಕೋರ್ಟ್ ತಡೆ : ಎಸ್ಸೆಸ್, ಎಸ್ಸೆಸ್ಸೆಂ ಸಂತಸ

ದಾವಣಗೆರೆ: ಹೊನ್ನಾಳಿ ತಾಲ್ಲೂಕಿನ ಹೊಟ್ಯಾಪುರ ಗ್ರಾಮದ ಉಜ್ಜಯಿನಿ ಶಾಖಾ ಹಿರೇಮಠದ ಪೀಠಾಧ್ಯಕ್ಷರಾದ ಶ್ರೀ ಗಿರಿಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳವರ ನಿಧನಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟೀಯ ಅಧ್ಯಕ್ಷರಾದ ಡಾ. ಶಾಮನೂರು ಶಿವಶಂಕರಪ್ಪನವರು ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸ್ವಾಮೀಜಿ ಅವರ ನಿಧನದ ಸುದ್ದಿ ಆಘಾತ ಮೂಡಿಸಿದೆ. ಮಾನವ ತತ್ವದ ಮೈಲುಗಳನ್ನು ತನ್ನದಾಗಿಸಿಕೊಂಡು ಸಮಾಜಕ್ಕೆ ಮಾರ್ಗದರ್ಶನ ಮಾಡುತ್ತಿದ್ದ ಸ್ವಾಮೀಜಿಯವರ ಮಾರ್ಗದರ್ಶನ ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟುಮಾಡಿದೆ ಎಂದು ತಮ್ಮ ಸಂತಾಪ ಸೂಚಕದಲ್ಲಿ ಅವರುಗಳು ತಿಳಿಸಿದ್ದಾರೆ.

ಸ್ವಾಮೀಜಿ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಮಠದ ವಿದ್ಯಾರ್ಥಿಗಳಿಗೆ ಹಾಗೂ ಭಕ್ತಾಧಿಗಳಿಗೆ ದೇವರು ಕರುಣಿಸಲಿ ಎಂದು ಅವರುಗಳು ಪ್ರಾರ್ಥಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!