SSC Recruitment 2023: ಬರೋಬ್ಬರಿ 26,146 ಹುದ್ದೆಗಳ ನೇಮಕಾತಿ, ಅಧಿಸೂಚನೆ, ಆಯ್ಕೆ, ವೇತನದ ಮಾಹಿತಿ

SSC GD Constable Recruitment Notification 2023 OUT for 26146 Vacancies

ಸಿಬ್ಬಂದಿ ನೇಮಕಾತಿ ಆಯೋಗದಿಂದ (ಎಸ್ಎಸ್‌ಸಿ) ಒಟ್ಟು 26,146 ಕಾನ್ಸ್ಟೆಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಸೇನಾ ಇಲಾಖೆಯ ವಿವಿಧ ವಿಭಾಗಗಳಲ್ಲಿ ನೇಮಕಾತಿ ನಡೆಯಲಿದೆ. 10ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ:
ಬಿಎಸ್ಎಫ್ – 6,174
ಸಿಐಎಸ್ಎಫ್ – 11,025
ಸಿಆರ್ಪಿಎಫ್ – 3,337
ಎಸ್ಎಸ್ಬಿ – 635
ಐಟಿಬಿಪಿ – 3,189
ಅಸ್ಸಾಂ ರೈಫಲ್ಸ್ – 1,490
ಎಸ್ಎಸ್ಎಫ್ – 296

ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಗಳಿಂದ 10ನೇ ತರಗತಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಕನಿಷ್ಠ ವಯೋಮಿತಿ 18, ಗರಿಷ್ಠ 23 ವರ್ಷ. ಹಿಂದುಳಿದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಮಹಿಳಾ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಇತರೆ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಗುಣಮಟ್ಟ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಹಾಗು ಸಂದರ್ಶನದ ಮೂಲಕ ಆಯ್ಕೆ.

ನವೆಂಬರ್ 24ರಿಂದ ಅರ್ಜಿ ಸಲ್ಲಿಕೆ‌ ಪ್ರಕ್ರಿಯೆ ಆರಂಭವಾಗಿದ್ದು, ಡಿಸೆಂಬರ್ 31 ಅರ್ಜಿ ಸಲ್ಲಿಕೆಗೆ ಕಡೆಯ ದಿನ. ಅರ್ಜಿ ಶುಲ್ಕ ಪಾವತಿಗೆ ಜನವರಿ 1 ಕಡೆಯ ದಿನವಾಗಿದೆ. ಈ ಹುದ್ದೆಗಳಿಗೆ ಫೆಬ್ರವರಿ/ಮಾರ್ಚ್ ನಲ್ಲಿ ಕಂಪ್ಯೂಟರ್ ಪರೀಕ್ಷೆ ನಡೆಸುವ ಸಾಧ್ಯತೆ ಇದೆ. ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ssc.nic.in ಹಾಗು 080 25502520, 09483862020 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು.

Leave a Reply

Your email address will not be published. Required fields are marked *

error: Content is protected !!