ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ : ನಿಷೇಧಾಜ್ಞೆ ಜಾರಿ 

ದಾವಣಗೆರೆ :ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳು ಮಾ.28 ರಿಂದ ಏ.11 ರವರೆಗೆ ಜಿಲ್ಲಾ ವ್ಯಾಪ್ತಿಯ 90 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವುದರಿಂದ, ಪರೀಕ್ಷೆಗಳನ್ನು ಸುಗಮವಾಗಿ ಜರುಗಿಸುವ ಸಲುವಾಗಿ ಪರೀಕ್ಷಾ ದಿನಗಳಂದು ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪರಿಧಿ ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕ ಪ್ರವೇಶಕ್ಕೆ ನಿಷೇಧಿತ ಪ್ರದೇಶವೆಂದು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೇರಾಕ್ಸ್ ಅಂಗಡಿಗಳು, ಸೈಬರ್ಕೆಫೆ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ಹೊರಡಿಸಿದ್ದಾರೆ.
ಆದೇಶವು ಪರೀಕ್ಷಾರ್ಥಿಗಳಿಗೆ ಹಾಗೂ ಪರೀಕ್ಷೆಯ ಕರ್ತವ್ಯ ನಿರ್ವಹಿಸಲು ನೇಮಕಾತಿ ಆದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ, ಪರೀಕ್ಷಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಬಿಡಲು ಬರುವ ಪೋಷಕರು ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರದ ಬಳಿ ಗುಂಪುಗೂಡುವುದು, ನಿಲ್ಲುವುದು ಮತ್ತು ವಾಹನಗಳನ್ನು ಪಾರ್ಕಿಂಗ್ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!