10 ನೇ ತರಗತಿ ಪರೀಕ್ಷೇಯ ಅಧಿಕೃತ ವೇಳಾಪಟ್ಟಿ ಬಿಡುಗಡೆ – ಸಚಿವ ಸುರೇಶ್ ಕುಮಾರ್

ಬೆಂಗಳೂರು: ಕರ್ನಾಟಕದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲು ತೀರ್ಮಾನಿಸಿರುವ ಶಿಕ್ಷಣ ಇಲಾಖೆ ಇಂದು ಮಹತ್ವದ ಸಭೆ ನಡೆಸಿ ನಿರ್ಧಾರ ಕೈಗೊಂಡಿದೆ. ಜುಲೈ ತಿಂಗಳ ಮೂರನೇ ವಾರದಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ಎಸ್​ಎಸ್​ಎಲ್​ಸಿ ಪರೀಕ್ಷೆಯ ಅಧಿಕೃತ ವೇಳಾಪಟ್ಟಿಯನ್ನು ಇಂದು (ಜೂನ್ 28) ನಡೆದ ಸಭೆಯಲ್ಲಿ ಅಂತಿಮಗೊಳಿಸಲಾಗಿದ್ದು, ಜುಲೈ 19 ರಂದು ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಬೆಳಗ್ಗೆ 10.30ರಿಂದ 1.30ರ ತನಕ ಹಾಗೂ ಭಾಷಾ ವಿಷಯಗಳ ಪರೀಕ್ಷೆ 22ರಂದು ಬೆಳಗ್ಗೆ 10.30ರಿಂದ 1.30ರ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದಾರೆ.

ಸುರಕ್ಷಿತ ವಾತಾವರಣದಲ್ಲಿ ಎಸ್‌ಎಸ್‌ಎಲ್​ಸಿ ಪರೀಕ್ಷೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಜಿಲ್ಲಾಧಿಕಾರಿಗಳು, ಸಿಇಒ, ಎಸ್​ಪಿ, ಡಿಎಚ್‌ಒಗಳು ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ರಾಜ್ಯದ ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಪಾಲ್ಗೊಂಡಿದ್ದರು. ಕರ್ನಾಟಕದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲು ತೀರ್ಮಾನಿಸಿರುವ ಶಿಕ್ಷಣ ಇಲಾಖೆ ಇಂದು ಮಹತ್ವದ ಸಭೆ ನಡೆಸಿ ನಿರ್ಧಾರ ಕೈಗೊಂಡಿದೆ. ಜುಲೈ ತಿಂಗಳ ಮೂರನೇ ವಾರದಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ಎಸ್​ಎಸ್​ಎಲ್​ಸಿ ಪರೀಕ್ಷೆಯ ಅಧಿಕೃತ ವೇಳಾಪಟ್ಟಿಯನ್ನು ಇಂದು (ಜೂನ್ 28) ನಡೆದ ಸಭೆಯಲ್ಲಿ ಅಂತಿಮಗೊಳಿಸಲಾಗಿದ್ದು, ಜುಲೈ 19 ರಂದು ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಬೆಳಗ್ಗೆ 10.30ರಿಂದ 1.30ರ ತನಕ ಹಾಗೂ ಭಾಷಾ ವಿಷಯಗಳ ಪರೀಕ್ಷೆ 22ರಂದು ಬೆಳಗ್ಗೆ 10.30ರಿಂದ 1.30ರ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದಾರೆ.

ಸುರಕ್ಷಿತ ವಾತಾವರಣದಲ್ಲಿ ಎಸ್‌ಎಸ್‌ಎಲ್​ಸಿ ಪರೀಕ್ಷೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಜಿಲ್ಲಾಧಿಕಾರಿಗಳು, ಸಿಇಒ, ಎಸ್​ಪಿ, ಡಿಎಚ್‌ಒಗಳು ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ರಾಜ್ಯದ ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಪಾಲ್ಗೊಂಡಿದ್ದರು. ಮಾದರಿ ಪ್ರಶ್ನೆಪತ್ರಿಕೆ ಶಿಕ್ಷಣ ಇಲಾಖೆಯ ವೆಬ್​ಸೈಟ್​ನಲ್ಲಿ ಲಭ್ಯವಿದ್ದು, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಪ್ರಥಮ ಭಾಷೆ ಕನ್ನಡ, ಪ್ರಥಮ ಭಾಷೆ ಉರ್ದು, ಪ್ರಥಮ ಭಾಷೆ ಇಂಗ್ಲಿಷ್, ಪ್ರಥಮ ಭಾಷೆ ಸಂಸ್ಕೃತ, ದ್ವಿತೀಯ ಭಾಷೆ ಇಂಗ್ಲಿಷ್, ದ್ವಿತೀಯ ಭಾಷೆ ಕನ್ನಡ, ತೃತೀಯ ಭಾಷೆ ಹಿಂದಿ, ತೃತೀಯ ಭಾಷೆ ಇಂಗ್ಲಿಷ್ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆ ನೀಡಲಾಗಿದೆ. ಪ್ರತಿ ವಿಷಯಕ್ಕೆ ತಲಾ 40 ಅಂಕಗಳಂತೆ ಒಟ್ಟು 120 ಅಂಕದ 2 ಪ್ರಶ್ನೆಪತ್ರಿಕೆಗಳನ್ನು ಈ ಬಾರಿ ನೀಡಲಾಗುತ್ತಿದ್ದು, 3 ಗಂಟೆಗಳ ಕಾಲ ಪರೀಕ್ಷೆ ಜರುಗಲಿದೆ. ಪರೀಕ್ಷೆಯಲ್ಲಿ ಎಲ್ಲ ಪ್ರಶ್ನೆಗಳು ಬಹು ಆಯ್ಕೆಗೆ ಸಂಬಂಧಿಸಿದವುಗಳೇ ಆಗಿರಲಿದ್ದು, ಉತ್ತರಗಳನ್ನು OMR ಶೀಟ್​ನಲ್ಲಿ ನಮೂದಿಸಬೇಕಿದೆ. ಇದಕ್ಕೆ ಸಂಬಂಧಿಸಿದಂತೆ ಒಎಮ್​ಆರ್​ ಶೀಟ್ ಮಾದರಿಯನ್ನೂ ಇಲಾಖೆ ಪ್ರಕಟ ಮಾಡಿದೆ.

Leave a Reply

Your email address will not be published. Required fields are marked *

error: Content is protected !!