ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಭರ್ಜರಿ ತಯಾರಿ : ಪರೀಕ್ಷೆಗೆ ಕೌಂಟ್ ಡೌನ್ ಶುರು.
ಬೆಂಗಳೂರು : SSLC ಪರೀಕ್ಷೆ ನಡೆಸಲು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ಕೊರೊನಾ ಬಳಿಕ ಇದೇ ಮೊದಲ ಬಾರಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ನಡೆಸಲು ಪರೀಕ್ಷಾ ಮಂಡಳಿ ಸಜ್ಜಾಗುತ್ತಿದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಬೋರ್ಡ್ ಕಠಿಣ ಕ್ರಮ ವಹಿಸಿದೆ. ಇದೇ ಮಾರ್ಚ್ 28 ರಿಂದ ಪರೀಕ್ಷೆ ಪ್ರಾರಂಭವಾಗಲಿದ್ದು, ಏಪ್ರಿಲ್ 11 ರವರೆಗೆ ನಡೆಯಲಿದೆ. ಈ ಬಾರಿ ವಿದ್ಯಾರ್ಥಿಗಳು ಹಾಲ್ ಟಿಕೆಟ್ ನ್ನು ಸ್ಕೂಲ್ ಲಾಗಿನ್ ಬಳಸಿ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಹೀಗಾಗಿ ಇಂದಿನಿಂದ ಎಲ್ಲಾ ಶಾಲೆಗಳಲ್ಲಿ ಹಾಲ್ ಟಿಕೆಟ್ ಡೌನ್ ಲೋಡ್ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಪರೀಕ್ಷೆ ಬರೆಯುತ್ತಿರುವ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ.
ಈ ಸಲ ಒಟ್ಟು 8 ಲಕ್ಷದ 73 ಸಾವಿರದ 846 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ
ಹೆಣ್ಣು ಮಕ್ಕಳು 4 ಲಕ್ಷದ 21ಸಾವಿರದ 110 ವಿದ್ಯಾರ್ಥಿನಿಯರು ಪರೀಕ್ಷೆ ತೆಗೆದುಕೊಂಡಿದ್ದಾರೆ
ಗಂಡು ಮಕ್ಕಳು 4 ಲಕ್ಷದ 52 ಸಾವಿರದ 765 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ
ತೃತೀಯ ಲಿಂಗಿ 4 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ
ಈ ಭಾರಿ 3,444 ಪರೀಕ್ಷಾ ಕೇಂದ್ರಗಳನ್ನ ತೆರೆಯಲಾಗಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ವೇಳಾಪಟ್ಟಿ sslc exam timetable
ಮಾರ್ಚ್ 28 – ಕನ್ನಡ ,ತೆಲುಗು, ಹಿಂದಿ, ಮರಾಠಿ,ತಮಿಳು,ಉರ್ದು, ಇಂಗ್ಲಿಷ್, ಇಂಗ್ಲಿಷ್, ಸಂಸ್ಕೃತ
ಮಾರ್ಚ್ – 30 ಇಂಗ್ಲಿಷ್, ಕನ್ನಡ
ಏಪ್ರಿಲ್ 1 – ಎಲಿಮೆಂಟ್ಸ್ ಆಫ್ ಮೆಕಾನಿಕಲ್ & ಎಲೆಕ್ಟ್ರಿಕ್ ಇಂಜಿನಿಯರಿಂಗ್, ಇಂಜಿನಿಯರಿಂಗ್ ಗ್ರಾಫಿಕ್ಸ್ – 2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಅರ್ಥಶಾಸ್ತ್ರ
ಏಪ್ರಿಲ್- 4 ಗಣಿತ,ಸಮಾಜಶಾಸ್ತ್ರ
ಏಪ್ರಿಲ್-06 ಸಮಾಜ ವಿಜ್ಞಾನ
ಏಪ್ರಿಲ್- 08 ಹಿಂದಿ,ಕನ್ನಡ, ಇಂಗ್ಲಿಷ್,ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು
ಎನ್ ಎಸ್ ಕ್ಯೂ ಪರೀಕ್ಷಾ ವಿಷಯಗಳು
ಮಾಹಿತಿ ತಂತ್ರಜ್ಞಾನ,ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್
ಏಪ್ರಿಲ್-11 ವಿಜ್ಞಾನ, ರಾಜ್ಯಶಾಸ್ತ್ರ
ಪರೀಕ್ಷಾಗೆ ಕೊರೊನಾ ಮಾರ್ಗಸೂಚಿಗಳು corona guidelines .
ಕೊರೋನಾ Corona ಕಡಿಮೆಯಾದ್ರು ಪರೀಕ್ಷಾ ಕೇಂದ್ರದಲ್ಲಿ ಮಾರ್ಗಸೂಚಿ ಪಾಲನೆ
ಕೋವಿಡ್ ಬಂದಿರುವ ವಿದ್ಯಾರ್ಥಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ನಡೆಸಲಾಗುತ್ತೆ
ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ ಪಾಲನೆ.
ಕೊಠಡಿಗಳಿಗೆ ಸ್ಯಾನಿಟೈಸ್ ಮಾಡಲಾಗುವುದು.
ಖಾಸಗಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷಾ ತೆರಯಲಾಗಿದೆ
ಈಗಾಗಲೇ ಪರೀಕ್ಷಾ ಕೇಂದ್ರಗಳಿಗೆ ಅಧಿಕ್ಷರು, ಮುಖ್ಯ ಅಧಿಕ್ಷರನ್ನ ನೇಮಕ ಮಾಡಲಾಗಿದೆ
ಪರೀಕ್ಷಾ ಅಕ್ರಮ ತಡೆಯಲು ಸಿಸಿಟಿವಿ ಅಳವಡಿಕೆ
ಕೊಠಡಿ ಮೆಲ್ವೀಚಾರಕರು, ಸ್ಥಳೀಯ ಜಾಗೃತದಳದ ನೇಮಕ ಕೂಡ ಮಾಡಲಾಗಿದೆ
ಈಭಾರಿ ಪ್ರಶ್ನೆ ಪತ್ರಿಕೆ ಹೇಗಿರಲಿದೆ
ಈ ವರ್ಷದ ಪ್ರಶ್ನೆ ಪತ್ರಿಕೆಯಲ್ಲಿ ಶೇ 20 % ಸಿಲಬಸ್ ಕಡಿತ
ಉಳಿದ ಶೇ.80 % ಸಿಲಬಸ್ ನಲ್ಲಿ ಪ್ರಶ್ನೆಗಳನ್ನ ಕೇಳಲಾಗಿದೆ
ಹಳೆ ಪದ್ಧತಿಯಲ್ಲಿ SSLC ಪರೀಕ್ಷೆ ನಡೆಯಲಿದೆ
ಬೆಳ್ಳಿಗೆ 10.30 ರಿಂದ 1.45 ರವರೆಗೆ ಪರೀಕ್ಷೆ ನಡೆಯಲಿದೆ
ಒಟ್ಟು 3 ಗಂಟೆ 15 ನಿಮಿಷಗಳ ಕಾಲ ಪರೀಕ್ಷೆ ನಡೆಯಲಿದೆ.
ಈ ರೀತಿ ಎಲ್ಲಾ ಸಿದ್ಧತೆಗಳನ್ನು ಪ್ರೌಢಶಿಕ್ಷಣ ಮಂಢಳಿ ತಯಾರಿ ಮಾಡಿಕೊಂಡಿದೆ. ಕೊರೊನಾ ಮುಗಿದ ಬಳಿಕ ರಾಜ್ಯ ಶಿಕ್ಷಣ ಇಲಾಖೆ ಪೂರ್ಣ ಪ್ರಮಾಣದಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಈಗಾಗ್ಲೇ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನಡೆದಿದ್ದಾರೆ. ಮತ್ತೊಂದೆಡೆ ವಿದ್ಯಾರ್ಥಿಗಳು ಕೂಡ ಪರೀಕ್ಷಾ ಸಿದ್ಧತೆ ನಡೆಸಿದ್ದು, ಪರೀಕ್ಷೆಗೆ ಕೌಂಟ್ ಡೌನ್ ಶುರುವಾಗಿದೆ. ಎರಡು ವರ್ಷದಿಂದ ಸರಿಯಾಗಿ ಪರೀಕ್ಷೆ ಬರೆಯದ ಶೈಕ್ಷಣಿಕ ಚಟುವಟಿಕೆಗಳಿಂದ ದೂರ ಉಳಿದಿದ್ದ ಮಕ್ಕಳು ಈ ಪರೀಕ್ಷೆಯನ್ನು ಯಾವ ರೀತಿ ಎದುರಿಸುತ್ತಾರೆ ಎಂಬುದು ಫಲಿತಾಂಶ ಬಂದ ಬಳಿಕ ಗೊತ್ತಾಗಲಿದೆ.