ಎಸ್ ಎಸ್ ಎಲ್ ಸಿ ಪರೀಕ್ಷೆ, 144 ಸೆಕ್ಷನ್ ಜಾರಿ
ದಾವಣಗೆರೆ: ಎಸ್.ಎಸ್.ಎಲ್.ಸಿ ಪರೀಕ್ಷೆ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಯಲಿದ್ದು ಪರೀಕ್ಷೆಯನ್ನು ಸುಗಮವಾಗಿ ಮತ್ತು ಪರೀಕ್ಷಾ ಅವ್ಯವಹಾರ ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಿ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಅವರು ಆದೇಶಿಸಿದ್ದಾರೆ. ಹಾಗೂ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಅಂಗಡಿ, ಇಂಟರ್ ನೆಟ್ ಕೇಂದ್ರ ಮುಚ್ಚುವಂತೆ ಆದೇಶಿಸಲಾಗಿದೆ.