2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ!

sslc

ದಾವಣಗೆರೆ: 2021-22ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ರಾಜ್ಯದ 8.7 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. 20,406 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.  ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುರಿತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಅವರು, ಕಳೆದ 10 ವರ್ಷಗಳಲ್ಲಿಯೇ ಹೆಚ್ಚು ಫಲಿತಾಂಶ ಈ ವರ್ಷ ಬಂದಿದೆ. ಶೇ. 90.29 ರಷ್ಟು ವಿದ್ಯಾರ್ಥಿನಿಯರು ಪಾಸಾಗಿದ್ದು, ಶೇ.81.3ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

145 ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆದಿದ್ದಾರೆ. ಇನ್ನು ವಿಜಯಪುರ ಗ್ರಾಮೀಣ ಭಾಗದ ಅಮಿತ್ ಮಾದರ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ, ತುಮಕೂರಿನ ಭೂಮಿಕಾ ದ್ವಿತೀಯ ಸ್ಥಾನ ಪಡೆದಿದ್ದಾರೆ. ಹಾವೇರಿ ಜಿಲ್ಲೆಯ ಪ್ರವೀಣ್ ನೇರಲಗಿ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದ್ದಾರೆ.ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಏಪ್ರಿಲ್ 23ರಿಂದ ಮೇ. 5ರವರೆಗೆ ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ 234 ಮೌಲ್ಯಮಾಪನ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಒಟ್ಟು 60295 ಮೌಲ್ಯಮಾಪಕರು ಪಾಲ್ಗೊಂಡಿದ್ದರು.

ಶಾಲಾ ವಿಧವಾರು ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು?:
ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳ ಒಟ್ಟು 145 ವಿದ್ಯಾರ್ಥಿಗಳು 625ಕ್ಕೆ 625 ಅಂಕ, 309 ವಿದ್ಯಾರ್ಥಿಗಳು 624 ಅಂಕ, 472 ವಿದ್ಯಾರ್ಥಿಗಳು 623 ಅಂಕ, 615 ವಿದ್ಯಾರ್ಥಿಗಳು 622 ಅಂಕ 706 ವಿದ್ಯಾರ್ಥಿಗಳು 621 ಅಂಕ, 773 ವಿದ್ಯಾರ್ಥಿಗಳು 620 ಅಂಕ ಪಡೆದಿದ್ದಾರೆ.

ವಿಷಯವಾರು ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳೆಷ್ಟು?:
ಪ್ರಸ್ತುತ ಸಾಲಿನಲ್ಲಿ ರಾಜ್ಯದ 19125 ವಿದ್ಯಾರ್ಥಿಗಳು ಕನ್ನಡ ಭಾಷೆಯಲ್ಲಿ 125ಕ್ಕೆ 125 ಅಂಕ ಪಡೆದಿದ್ದಾರೆ. 13458 ವಿದ್ಯಾರ್ಥಿಗಳು ಇಂಗ್ಲೀಷ್‌ನಲ್ಲಿ 100ಕ್ಕೆ 100 ಅಂಕ, ಹಿಂದಿ ಭಾಷೆಯಲ್ಲಿ 43126 ವಿದ್ಯಾರ್ಥಿಗಳು 100ಕ್ಕೆ 100 ಅಂಕ, 13683 ವಿದ್ಯಾರ್ಥಿಗಳು ಗಣಿತ ಭಾಷೆಯಲ್ಲಿ 100ಕ್ಕೆ 100 ಅಂಕ, 6592 ವಿದ್ಯಾರ್ಥಿಗಳು ವಿಜ್ಞಾನ ಭಾಷೆಯಲ್ಲಿ 100ಕ್ಕೆ 100, 50782 ವಿದ್ಯಾರ್ಥಿಗಳು ಸಮಾಜ ವಿಜ್ಞಾನದಲ್ಲಿ 100ಕ್ಕೆ 100 ಅಂಕ ಪಡೆದಿದ್ದಾರೆ.

ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಮೇಲುಗೈ:
2021-22ನೇ ಸಾಲಿನಲ್ಲಿ ನಗರ ಪ್ರದೇಶದ ವಿದ್ಯಾರ್ಥಿಗಳು ಶೇ.86.64ರಷ್ಟು ಹಾಗೂ ಗ್ರಾಮೀಣ ಭಾಗದ ಶೇ.91.32ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಗ್ರಾಮೀಣ ಭಾಗದವರೇ ಮೇಲುಗೈ ಸಾಧಿಸಿದ್ದಾರೆ.

ಶ್ರೇಣಿವಾರು ಫಲಿತಾಂಶ:
ರಾಜ್ಯದ 118875 ವಿದ್ಯಾರ್ಥಿಗಳು ಎ+, 182600 ವಿದ್ಯಾರ್ಥಿಗಳು ಎ, 173528 ವಿದ್ಯಾರ್ಥಿಗಳು ಬಿ+, 143900 ವಿದ್ಯಾರ್ಥಿಗಳು ಬಿ, 87801 ವಿದ್ಯಾರ್ಥಿಗಳು ಸಿ+ ಹಾಗೂ 14627 ವಿದ್ಯಾರ್ಥಿಗಳು ಸಿ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

 

garudavoice21@gmail.com 9740365719

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!