ನಾಳೆ SSLC ಫಲಿತಾಂಶ ಪ್ರಕಟ
ಕಳೆದ ಮಾರ್ಚ್-ಏಪ್ರಿಲ್‌ನಲ್ಲಿ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ.
ನಾಳೆ ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಟಿಯಲ್ಲಿ ಫಲಿತಾಂಶ ಪ್ರಕಟ ಮಾಡಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷೆ ಎನ್. ಮಂಜುಶ್ರೀ ಅವರು ಮಾಹಿತಿ ನೀಡಿದ್ದಾರೆ.
ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ-1ನ್ನು ದಿನಾಂಕ 25.03.2024 ರಿಂದ 06.04.2024 ರವರೆಗೆ ಬರೆದಿದ್ದಾರೆ. 4,41,910 ಬಾಲಕರು ಮತ್ತು 4,28,058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ ಫಲಿತಾಂಶದ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 09.05.2024 ರಂದು ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ:09.05.2024ರ ಬೆಳಗ್ಗೆ 10.30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ತಿಳಿಸಲಾಗಿದೆ.