SSM: ಎಸ್ ಎಸ್ ಎಂ ಜನ್ಮದಿನ; ವಿಶೇಷಚೇತನರು- ಹಿರಿಯ ನಾಗರೀಕರಿಗೆ ಸಾಧನ ಸಲಕರಣೆಗಳ ವಿತರಣೆ

Ssm 58th birthday

ದಾವಣಗೆರೆ; (SSM) ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಅವರ 58 ನೇ ಜನ್ಮದಿನದ ಪ್ರಯುಕ್ತ ಎಸ್ ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗ ದಾವಣಗೆರೆ ಹಾಗೂ ಕೇಂದ್ರ ಸರ್ಕಾರದ ಅಲಿಂಕೋ ಸಂಸ್ಥೆ, ಸಿಆರ್ ಸಿ ದಾವಣಗೆರೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದೊಂದಿಗೆ ದಾವಣಗೆರೆಯ ಶ್ರೀ ಸದ್ಯೋಜ್ಯಾತ ಮಠದಲ್ಲಿ ಸೆ.22 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಸಾಧನಸಲಕರಣೆಗಳನ್ನು ವಿತರಿಸಲಾಗುವುದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದೇ ಸೆಪ್ಟೆಂಬರ್‌ 10 ರಂದು ದಾವಣಗೆರೆಯ ಶಾಮನೂರು ರಸ್ತೆಯಲ್ಲಿರುವ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ದಾವಣಗೆರೆ ಉತ್ತರ, ದಕ್ಷಿಣ ಹಾಗೂ ಮಾಯಕೊಂಡ ವಿಧಾನಸಭಾಕ್ಷೇತ್ರದ ವಿಶೇಷಚೇತನರಿಗೆ ಮತ್ತು 60 ವರ್ಷ ತುಂಬಿದ ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಯ ಮೌಲ್ಯಮಾಪನ ಶಿಬಿರ ಆಯೋಜಿಸಲಾಗಿತ್ತು.

ಈ ವೇಳೆ ಸಾವಿರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಫಲಾನುಭವಿಗಳು ಭಾಗವಹಿಸಿದ್ದರು.ಸಮಗ್ರ ಪರಿಶೀಲನೆಯ ನಂತರ ಆಯ್ಕೆಯಾದ‌ 343 ಅರ್ಹ ಫಲಾನುಭವಿಗಳಿಗೆ ಇಂದು ಸುಮಾರು 995
ಸಾಧನ ಸಲಕರಣೆಗಳನ್ನು ವಿತರಿಸಲಾಗುವುದು.

ಮೊದಲ ಹಂತದಲ್ಲಿ ದಾವಣಗೆರೆ ಉತ್ತರ, ದಕ್ಷಿಣ ಮತ್ತು ಮಾಯಕೊಂಡ ವಿಧನಾಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಿಬಿರ ಆಯೋಜಿಸಲಾಗಿದ್ದು.ಉಳಿದ ಐದು ವಿಧಾನಸಭಾ ಕ್ಷೇತ್ರದಲ್ಲಿ ಮುಂದಿನದಿನಗಳಲ್ಲಿ ಶಿಬಿರ ನಡೆಸಲಾಗುವುದು.

ಈ ಕಾರ್ಯಕ್ರಮದಲ್ಲಿ ಅಂಧರಿಗೆ ಮೊಬೈಲ್,ವೈಬ್ರೇಟಿಂಗ್ ಸ್ಟಿಕ್ ಹಾಗೂ ಅಗ ವೀಲ್ ಚೇರ್,ತ್ರಿಚಕ್ರ ವಾಹನ ಸೇರಿದಂತೆ ಸುಮಾರು 28.82 ಲಕ್ಷ ಮೌಲ್ಯದ ಸಲಕರಣೆಗಳನ್ನು ವಿತರಣೆ ಮಾಡಲಾಗುತ್ತಿದೆ.

ಆದ್ದರಿಂದ ಅರ್ಹ ಫಲಾನುಭವಿಗಳು ಹಿಂದಿನ ಶಿಬಿರದಲ್ಲಿ ನೀಡಲಾಗಿದ್ದ ಟೋಕನ್ ನೊಂದಿಗೆ ಹಾಜರಾಗಿ ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಲು ಸಂಸದರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳು

error: Content is protected !!