St Reservation: ಪರಿಶಿಷ್ಟ ಪಂಗಡಕ್ಕೆ ಶೇ 7.5% ಮೀಸಲಾತಿ ಹಾಗೂ ವಿವಿಧ ಬೇಡಿಕೆಗಳಿಗೆ ಈಡೇರಿಕೆಗೆ ಸಿಎಂ ಗೆ ಮನವಿ ಸಲ್ಲಿಸಿದ ಸಾಮಾಜಿಕ ಕಾರ್ಯಕರ್ತ ಅಂಜುಕುಮಾರ್

ದಾವಣಗೆರೆ: ಪರಿಶಿಷ್ಟ ಪಂಗಡಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸಂವಿಧಾನ ಬದ್ಧವಾದ ಶೇ 7.5% ಮೀಸಲಾತಿ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಪಿ.ಬಿ.ಅಂಜುಕುಮಾರ್ ನೇತೃತ್ವದಲ್ಲಿ ವಾಲ್ಮೀಕಿ ನಾಯಕ ಸಮಾಜದವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಚುನಾವಣಾ ಪೂರ್ವದಲ್ಲಿ ರಾಜ್ಯ ಬಿಜೆಪಿ ಘೋಷಿಸಿದಂತೆ ವಾಲ್ಮೀಕಿ ನಾಯಕ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು, ಚಿತ್ರದುರ್ಗದಲ್ಲಿ ಮದಕರಿ ನಾಯಕರ ೧೦೦ ಕೋಟಿ ವೆಚ್ಚದ ಥೀಮ್‌ಪಾರ್ಕ್ ನಿರ್ಮಿಸಬೇಕು, ರಾಜ್ಯ ಸಚಿವ ಸಂಪುಟದಲ್ಲಿ ಸಮಾಜದ ಜನಸಂಖ್ಯೆಯ ಆಧಾರದಲ್ಲಿ ಇನ್ನೊಂದು ಸಚಿವ ಸ್ಥಾನ ನೀಡಬೇಕು ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ೫೦೦ ಕೋಟಿ ಅನುದಾನ ನೀಡಬೇಕೆಂದು ಇದೇ ವೇಳೆ ಸಿಎಂ ಬೊಮ್ಮಾಯಿಗೆ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಏಕತಾ ವೇದಿಕೆಯ ರಾಜ್ಯಾಧ್ಯಕ್ಷ ಎನ್.ಹೆಚ್.ಹಾಲೇಶ್, ಮಾನವಹಕ್ಕುಗಳ ರಕ್ಷಣೆ ಕಾರ್ಯದರ್ಶಿ ಪ್ರಕಾಶ ಆವರಗೆರೆ, ಟಿ.ಎಸ್.ಕರಿಯಪ್ಪ, ಬಿ.ಮಲ್ಲಿಕಾರ್ಜುನ, ನಿಟ್ಟೂರು ಅಜೇಯ್ , ಅಣ್ಣಪ್ಪ, ಕರಿಯಪ್ಪ ಮಾಳಿಗಿ ಹಾಗೂ ಇನ್ನಿತರರು ಇದ್ದರು.

Leave a Reply

Your email address will not be published. Required fields are marked *

error: Content is protected !!