ಉಪನೋಂದಣಾಧಿಕಾರಿ ಕಚೇರಿ ಎರಡು ಕಡೆ ಪ್ರಾರಂಭಿಸಲು ಬಿ ವೀರಣ್ಣ ಮನವಿ

ದಾವಣಗೆರೆ, ಜು. 15- ಸುಸಜ್ಜಿತ ಸೌಲಭ್ಯಗಳಿಲ್ಲದೆ ಸಾರ್ವಜನಿಕರಿಗೆ ಪ್ರತಿನಿತ್ಯ ತೊಂದರೆಯಾಗುತ್ತಿರುವ ಜಿಲ್ಲಾ ಉಪನೊಂದಣಾಧಿಕಾರಿಗಳ ಕಛೇರಿ, ದಾವಣಗೆರೆಯಲ್ಲಿ ಉತ್ತರ ಮತ್ತು ದಕ್ಷಿಣ ವಿಭಾಗದಲ್ಲಿ ಎರಡು ಭಾಗದಲ್ಲಿ ಉಪನೋಂದಣಾಧಿಕಾರಿಗಳ ಕಚೇರಿ ಪ್ರಾರಂಭಿಸಲು ಮಾಜಿ ನಗರಸಭೆ ಅಧ್ಯಕ್ಷ ಬಿ. ವೀರಣ್ಣ ಒತ್ತಾಯಿಸಿದ್ದಾರೆ.
ದಾವಣಗೆರೆ ಪಿ.ಬಿ. ರಸ್ತೆಯಲ್ಲಿರುವ ಸಬ್‌ರಿಜಿಸ್ಟ್ರಾರ್ ಕಚೇರಿಗೆ ಹೋಗಲು ಸರಿಯಾದ ರಸ್ತೆ, ವಾಹನಗಳಿಗೆ ಪಾರ್ಕಿಂಗ್ ಸಾರ್ವಜನಿಕರಿಗೆ ಕುಳಿತುಕೊಳ್ಳಲು ಸರಿಯಾದ ಆಸನದ ವ್ಯವಸ್ಥೆ ಕುಡಿಯುವ ನೀರು ಹಾಗೂ ಎಲ್ಲಾ ಸೌಲಭ್ಯಗಳಿಗೆ ತೊಂದರೆಯಾಗುತ್ತಿದೆ. ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ಆದಾಯ ಬರುವ ಇಲಾಖೆಗೆ ದಿನನಿತ್ಯ ಸಾವಿರಾರು ಜನರು ತಮ್ಮ ಕೆಲಸ ಕಾರ್ಯಗಳಿಗೆ ಬರುತ್ತಾರೆ. ಬಂದಂತಹವರಿಗೆ ಸರಿಯಾದ ವ್ಯವಸ್ಥೆಗಳಿಲ್ಲ. ಈಗಿರುವ ಕಚೇರಿ ಬಹಳ ಚಿಕ್ಕದಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗಿದೆ ಮತ್ತು ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಕಂಪ್ಯೂಟರ್‌ಗಳು ಕೂಡ ಬಹಳ ಹಳೆಯದಾಗಿದೆ. ಆದ್ದರಿಂದ ಸ್ಮಾರ್ಟ್ ಸಿಟಿಯಲ್ಲಿ ಸುಸಜ್ಜಿತ ಉಪನೋಂದಣಾಧಿಕಾರಿಗಳವರ ಕಚೇರಿ ಬೇಕಾಗಿದೆ. ಜಿಲ್ಲಾ ಹಾಗೂ ಇನ್ನಿತರೆ ಜಿಲ್ಲೆಗಳಿಂದ ಸಾರ್ವಜನಿಕರು ಪ್ರತಿನಿತ್ಯ ಬರುತ್ತಾರೆ.
ಆದ್ದರಿಂದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಮತ್ತು ಉತ್ತರ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೊಂದು ಕಚೇರಿ ಪ್ರಾರಂಭಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗೂ ರಾಜ್ಯ ಸರ್ಕಾರ ಜಿಲ್ಲಾಡಳಿತ ಕೂಡಲೇ ಇತ್ತ ಗಮನಹರಿಸಿ, ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸಬೇಕಾಗಿದೆ. ದೇಶಾದ್ಯಂತ ಕೊರೋನ ಮಹಾಮಾರಿ ಇರುವುದರಿಂದ ಸಬ್‌ರಿಜಿಸ್ಟಾçರ್ ಕಚೇರಿಯಲ್ಲಿ ಬಂದ ಸಾರ್ವಜನಿಕರಿಗೆ ಕುಳಿತುಕೊಳ್ಳಲು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸ್ಥಳಾವಕಾಶವಿಲ್ಲ. ಈ ಕಚೇರಿಗೆ ಸಾರ್ವಜನಿಕರು ಬರಲು ಹಿಂದೇಟು ಹಾಕುವಂತಾಗಿದೆ. ದಾವಣಗೆರೆ ಸ್ಮಾರ್ಟ್ ಸಿಟಿಯಾಗುತ್ತಿದ್ದು, ದಾವಣಗೆರೆಯಲ್ಲಿ ಎರಡು ಉಪನೋಂದಣಾಧಿಕಾರಿಗಳ ಅವಶ್ಯಕತೆ ಇದೆ ಹಾಗೂ ಕಚೇರಿಯಲ್ಲಿ ಸುಸಜ್ಜಿತ ಪೀಠೋಪಕರಣಗಳ ಅವಶ್ಯಕತೆ ಇದೆ ಕೂಡಲೇ ಸರ್ಕಾರ ಮತ್ತು ಜಿಲ್ಲಾಡಳಿತ ಗಮನಹರಿಸಬೇಕಾಗಿದೆ. ವಯೋವೃದ್ಧರು, ಅಂಗವಿಕಲರು ಈ ಕಚೇರಿಗೆ ಬರಲು ಬಹಳ ತೊಂದರೆಯಾಗುತ್ತಿದೆ ಎಂದು ಮಾಜಿ ನಗರಸಭೆ ಅಧ್ಯಕ್ಷ ಬಿ. ವೀರಣ್ಣ ಪತ್ರಿಕಾ ಪ್ರಕರಟಣೆಯಲ್ಲಿ ಒತ್ತಾಯಿಸಿದ್ದಾರೆ