ದಾವಣಗೆರೆ: ನಗರದ ಬಿ.ಪಿ. ರಸ್ತೆಯಲ್ಲಿರುವ ಕಮ್ಮವಾರಿ ಸಮುದಾಯ ಭವನದಲ್ಲಿ ಇದೇ ಫೆ.26ರಂದು ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದಿಂದ `ಶೈಕ್ಷಣಿಕ ಕಾರ್ಯಾಗಾರ ಮತ್ತು ರಾಜ್ಯಮಟ್ಟದ ಪದಾಧಿಕಾರಿಗಳ ಶೈಕ್ಷಣಿಕ ಸಮಾವೇಶ ಹಾಗೂ ಸದಸ್ಯರ ಮಹಾಸಭೆ’ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಪದಾಧಿಕಾರಿ ಡಿ.ಎಂ. ಮಂಜುನಾಥ ತಿಳಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಎಸ್.ಎ. ರವೀಂದ್ರನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ವಿಧಾನಪರಿಷತ್ ಸಭಾಪತಿ ಬಸವರಾಜ ಎಸ್. ಹೊರಟ್ಟಿ, ಮುಖ್ಯ ಸಚೇತಕ ವೈ.ಎ. ನಾರಾಯಣಸ್ವಾಮಿ, ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಶಾಮನೂರು ಶಿವಶಂಕರಪ್ಪ, ಪುಟ್ಟಣ್ಣ, ಮರಿತಿಬ್ಬೇಗೌಡ, ಪ್ರಕಾಶ್ ಹುಕ್ಕೇರಿ, ಆಯನೂರು ಮಂಜುನಾಥ್ ಸೇರಿದಂತೆ ಜನಪ್ರತಿನಿಧಿಗಳು, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಜಿಲ್ಲಾಧ್ಯಕ್ಷ ಬಿ.ಫಾಲಾಕ್ಷಿ ಸೇರಿದಂತೆ ಶಿಕ್ಷಕರ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ದ್ವಾರಕೀಶ್ ನಾಯ್ಕ್ ಎಸ್., ಸಿದ್ದೇಶ್ ಸಿ., ಬಿ.ಆರ್. ಚಂದ್ರಪ್ಪ, ಲಿಂಗರಾಜ್ ಎಂ.ಇ., ಸವಿತಾ, ಕಲ್ಲಿನಾಥ್ ಎ.ಎಸ್. ಇದ್ದರು.
