ಫೆ.3ರಿಂದ 5ರವರೆಗೆ ರಾಜ್ಯಮಟ್ಟದ ಕೃಷಿ ಮೇಳ

ದಾವಣಗೆರೆ : ಡಾ.ಸಾಯಿಲ್ ಪ್ರಾಯೋಜಕತ್ವದಲ್ಲಿ ಮೈಕ್ರೋಬಿ ಫೌಂಡೇಷನ್, ಯು.ಎಸ್.ಕ್ಮ್ಯೂನಿಕೇಷನ್ ಸಂಯುಕ್ತಾಶ್ರಯದಲ್ಲಿ ಇದೇ 3ರಿಂದ 5ರವರೆಗೆ ನಗರದ ಹೈಸ್ಕೂಲ್ ಮೈದಾನದಲ್ಲಿ ಕೃಷಿ ಮೇಳ ಆಯೋಜಿಸಲಾಗಿದೆ ಎಂದು ಮೈಕ್ರೋಬಿ ಫೌಂಡೇಷನ್ ಜಿಲ್ಲಾ ಸಂಚಾಲಕ ಮಹದೇವಪ್ಪ ದಿದ್ದಿಗೆ ತಿಳಿಸಿದ್ದಾರೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಳದಲ್ಲಿ 45 ವಿವಿಧ ಕಂಪನಿಗಳು ಭಾಗವಹಿಸಲಿದ್ದು, 170ಕ್ಕೂ ಹೆಚ್ಚು ಮಳಿಗೆಗಳು ಇರಲಿವೆ ಎಂದರು.
ದಿ.3ರಂದು ಬೆಳಿಗ್ಗೆ 11.30ಕ್ಕೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಕೃಷಿ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ .ಶಾಸಕ ಎಸ್.ಎ.ರವೀಂದ್ರನಾಥ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿ.ಪಂ. ಸಿಇಒ ಡಾ.ಎ. ಚನ್ನಪ್ಪ ಇತರರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ದಿ.4ರಂದು ಬೆಳಿಗ್ಗೆ 11 ಗಂಟೆಯ ಕಾರ್ಯಕ್ರಮದಲ್ಲಿ ಮಾಯಕೊಂಡ ಶಾಸಕ ಪ್ರೊ.ಎನ್. ಲಿಂಗಣ್ಣ, ಹರಿಹರ ಶಾಸಕ ಎಸ್.ರಾಮಪ್ಪ, ಡಾ.ಇಂದಿರೇಶ್ ಕೆ.ಎಂ. ಭಾಗವಹಿಸಲಿದ್ದಾರೆ. ಸಾಧಕರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.
ದಿ.5ರಂದು ಬೆಳಿಗ್ಗೆ 11 ಗಂಟೆಗೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮಿದ್ದು, ಕೃಷಿ ಸಚಿವ ಬಿ.ಸಿ. ಪಾಟೀಲ, ಶಾಸಕರುಗಳಾದ ಎಂ.ಪಿ. ರೇಣುಕಾಚಾರ್ಯ, ಎಸ್.ವಿ. ರಾಮಚಂದ್ರ, ಮಾಡಾಳು ವಿರೂಪಾಕ್ಷಪ್ಪ, ಎಸ್ಪಿ ಸಿ.ಬಿ. ರಿಷ್ಯಂತ್ ಇತರರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಕಲ್ಮೇಶ್, ರವಿಯೋಗರಾಜು, ವಿಶ್ವನಾಥ್ ಬಿ.ಸಿ., ರವಿಯೋಗರಾಜು ಉಪಸ್ಥಿತರಿದ್ದರು.