ರಾಜ್ಯ ಮಟ್ಟದ ಬಾಸ್ಕೆಟ್‌ಬಾಲ್ ಪಂದ್ಯಾವಳಿ.! ಜೆಜೆಎಂ ಮೆಡಿಕಲ್ ಕಾಲೇಜ್ ಚಾಂಪಿಯನ್

ದಾವಣಗೆರೆ: ದಾವಣಗೆರೆ ನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ರಾಜ್ಯಮಟ್ಟದ ಬ್ಯಾಸ್ಕೆಟ್ಬಾಲ್ ಪಂದ್ಯಾವಳಿಯನ್ನು ನಗರದ ಜೆ ಜೆ ಎಂ ವೈದ್ಯಕೀಯ ಕಾಲೇಜು ಆಯೋಜಿಸಿತ್ತು.

ಪುರುಷರ ವಿಭಾಗದಲ್ಲಿ 36 ತಂಡಗಳು ಹಾಗೂ ಮಹಿಳೆಯರ ವಿಭಾಗದಲ್ಲಿ 22 ತಂಡಗಳು ಭಾಗವಹಿಸಿದ್ದವು. ಉತ್ತಮ ಪೈಪೋಟಿಯೊಂದಿಗೆ ನಡೆದ ಪಂದ್ಯಗಳಲ್ಲಿ ಅತ್ಯಂತ ರೋಮಾಂಚನಕಾರಿ ಪಂದ್ಯಗಳು ನಡೆದವು. ಈ ಪಂದ್ಯಾವಳಿಯ ಪುರುಷರ ಫೈನಲ್ ಪಂದ್ಯದಲ್ಲಿ ಜೆಜೆಎಂ ಮೆಡಿಕಲ್ ಕಾಲೇಜು ಬೆಂಗಳೂರಿನ ಬೆಂಗಳೂರು ಮೆಡಿಕಲ್ ಕಾಲೇಜ್ ಅನ್ನು 59-57 ಪಾಯಿಂಟ್ಸ್ ಗಳಿಂದ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೂರನೇ ಸ್ಥಾನವನ್ನು ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಹಾಗೂ ನಾಲ್ಕನೇ ಸ್ಥಾನವನ್ನು ಸೈಂಟ್ ಜಾನ್ಸ್ ಮೆಡಿಕಲ್ ಕಾಲೇಜ್ ಪಡೆದುಕೊಂಡಿತು.

ಮಹಿಳೆಯರ ವಿಭಾಗದಲ್ಲಿ ಜೆಜೆಎಂ ಮೆಡಿಕಲ್ ಕಾಲೇಜು ಎಂಎಸ್ ರಾಮಯ್ಯ ಮೆಡಿಕಲ್ ಕಾಲೇಜು ಬೆಂಗಳೂರನ್ನು19-17 ರಲ್ಲಿ ಸೋಲಿಸಿ ಚಾಂಪಿಯನ್ ಆಯ್ತುಮೂರನೇ ಸ್ಥಾನವನ್ನು ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಹಾಗೂ ನಾಲ್ಕನೇ ಸ್ಥಾನವನ್ನು ಬೆಂಗಳೂರಿನ ಬೆಂಗಳೂರು ದಂತ ವೈದ್ಯಕೀಯ ಮಹಾವಿದ್ಯಾಲಯ ಪಡೆದುಕೊಂಡವು.

ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾll ಎಸ್ ಬಿ ಮುರುಗೇಶ್ ಭಾಗವಹಿಸಿ ಎಲ್ಲಾ ಮಕ್ಕಳಿಗೂ ಅಭಿನಂದನೆ ಸಲ್ಲಿಸಿದರು. ಮಹಿಳೆಯರ ವಿಭಾಗದಲ್ಲಿಬೆಂಗಳೂರು ದಂತ ವೈದ್ಯಕೀಯ ಮಹಾವಿದ್ಯಾಲಯ ಆಟಗಾರ್ತಿ ಶರಣ್ಯ ಅತ್ಯುತ್ತಮ ಬಾಲ್ ಹ್ಯಾಂಡ್ಲರ್, ರಾಮಯ್ಯ ಕಾಲೇಜಿನ ಸಂಸ್ಕೃತಿ ಪಾಟಿಲ್ ಬೆಸ್ಟ್ ಶೂಟರ್, ಜೆಜೆಎಂ ಮೆಡಿಕಲ್ ಕಾಲೇಜಿನ ಸೌಗಂಧಿಕ ಪಂದ್ಯಾವಳಿಗೆ ಅತ್ಯುತ್ತಮ ಆಟಗಾರ್ತಿಯಾಗಿ ಪ್ರಶಸ್ತಿ ಪಡೆದರು. ಪುರುಷರು ವಿಭಾದದಲ್ಲಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ರಿಷಬ್ ಅತ್ಯುತ್ತಮ ಬಾಲ್ ಹ್ಯಾಂಡ್ಲರ್, ಬೆಂಗಳೂರು ಮೆಡಿಕಲ್ ಕಾಲೇಜಿನ ಬೆಸ್ಟ್ ಶೂಟರ್ ಆಗಿ ಅಮಿತ್ ಹಾಗೂ ಜೆಜೆಎಂ ಮೆಡಿಕಲ್ ಕಾಲೇಜಿನ ಕಾವ್ಯಾನಂದ ಪಂದ್ಯಾವಳಿಯ ಅತ್ಯುತ್ತಮ ಆಟಗಾರನಾಗಿ ಹೊರಹೊಮ್ಮಿದರು.

ಪ್ರಶಸ್ತಿ ಪಡೆದವರಿಗೆ ಕಾಲೇಜಿನ ಚೇರ್ಮನ್ ರಾದ ಡಾll ಶಾಮನೂರು ಶಿವಶಂಕರಪ್ಪ, ಬಾಪೂಜಿ ವಿದ್ಯಾಸಂಸ್ಥೆಯ ಜಂಟಿ ಕಾರ್ಯದರ್ಶಿ ಶ್ರೀ ಎಸ್ ಎಸ್ ಮಲ್ಲಿಕಾರ್ಜುನ್ ರವರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!