ಬೆಣ್ಣೆನಗರಿಯಲ್ಲಿ ಅ, 22,23,24 ರಂದು ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು

ದಾವಣಗೆರೆ: ಅಕ್ಟೋಬರ್ 22, 23 ಮತ್ತು 24 ರಂದು ಜಿಲ್ಲಾ ಕ್ರೀಡಾಂಗಣ ದಾವಣಗೆರೆ ಇಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು-2021 ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ,ಬೆಂಗಳೂರು ಜಿಲ್ಲಾ ಶಾಖೆ ದಾವಣಗೆರೆ,ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಾವಣಗೆರೆ ಇವರ ಸಹಯೋಗದಲ್ಲಿ ಆಯೋಜಿಸಿರುವ ಕ್ರೀಡಾಕೂಟ
ಕಾರ್ಯಕ್ರಮವನ್ನು ಅಕ್ಟೋಬರ್ 22 ಶುಕ್ರವಾರ ಸಂಜೆ 4,30ಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಯಿ ಉದ್ಘಾಟಿಸುವರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್ ಷಡಾಕ್ಷರಿ ಅಧ್ಯಕ್ಷತೆ ವಹಿಸುವರು.
ಕ್ರೀಡೆ, ಯುವಜನ ಸೇವೆ ಮತ್ತು ರೇಷ್ಮೆ ಸಚಿವರಾದ ಕೆ.ಸಿ.ನಾರಾಯಣಗೌಡ ಕ್ರೀಡಾಜ್ಯೋತಿ ಸ್ವೀಕರಿಸುವರು. ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಧ್ವಜಾರೋಹಣ ಮಾಡುವರು. ಲೋಕಸಭಾ ಸದಸ್ಯರಾದ ಜಿ.ಎಂ ಸಿದ್ದೇಶ್ವರ ಕ್ರೀಡಾ ಪ್ರತಿಜ್ಞಾ ಸ್ವೀಕಾರ ಮಾಡುವರು.
ಮುಖ್ಯತಿಥಿಗಳಾಗಿ ಶಾಸಕರುಗಳಾದ ಎಂ.ಪಿ. ರೇಣುಕಾಚಾರ್ಯ, ಮಾಡಾಳ್ ವಿರೂಪಾಕ್ಷಪ್ಪ, ಎಸ್.ವಿ.ರಾಮಚಂದ್ರ, ಪ್ರೊ.ಎನ್.ಲಿಂಗಣ್ಣ, ಶಾಮನೂರು ಶಿವಶಂಕರಪ್ಪ, ವಿಧಾನಪರಿಷತ್ ಸದಸ್ಯರುಗಳಾದ ಜಿ.ರಘು ಆಚಾರ್, ಆರ್.ಪ್ರಸನ್ನಕುಮಾರ್, ಲಹರ್‍ಸಿಂಗ್ ಸಿರೋಯಾ, ಮೋಹನ್ ಕುಮಾರ್ ಕೊಂಡಜ್ಜಿ, ಶಾಸಕರುಗಳಾದ ಎಸ್.ಎ ರವೀಂದ್ರನಾಥ್, ಎಸ್.ರಾಮಪ್ಪ, ವಿಧಾನ ಪರಿಷತ್ಕೆ ಸದಸ್ಯರಾದ ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್ ಎನ್., ಡಾ.ತೇಜಸ್ವಿನಿಗೌಡ, ಆಯನೂರು ಮಂಜುನಾಥ್, ಎಸ್.ಎಲ್.ಭೋಜೆಗೌಡ, ಡಾ.ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ.ಗೌಡ, ಆರ್.ಶಂಕರ್, ಮಹಾನಗರಪಾಲಿಕೆ ಮಹಾಪೌರ ಎಸ್.ಟಿ.ವೀರೇಶ್, ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದೇವರಮನಿ ಶಿವಕುಮಾರ್, ಯುವ ಮತ್ತು ಸಬಲೀಕರಣ ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್ ಸೇರಿದಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮಹಾನಗರಪಾಲಿಕೆ ಆಯುಕ್ತರು ಪಾಲ್ಗೊಳ್ಳಲಿದ್ದು ಅಕ್ಟೋಬರ್ 22 ಹಾಗೂ 23 ರ ಸಂಜೆ ಸಂಗೀತ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.