ಹೋಟೆಲ್ ಸಾಯಿ ಇಂಟರ್‌ನ್ಯಾಷನಲ್‌ನಲ್ಲಿ ರಾಜ್ಯಮಟ್ಟದ ವಿಶೇಷ ಕಾರ್ಯದಕ್ಷತೆ ತರಬೇತಿ

ಇಂಟರ್‌ನ್ಯಾಷನಲ್
ದಾವಣಗೆರೆ: ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ, ದಾವಣಗೆರೆ ಜಿಲ್ಲಾ ಪಟ್ಟಣ ಸಹಕಾರ ಬ್ಯಾಂಕುಗಳ ಒಕ್ಕೂಟ ಇವರುಗಳ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 11ರಂದು ಬೆಳಿಗ್ಗೆ 11.30ಗಂಟೆಗೆ ಪಟ್ಟಣ ಸಹಕಾರ ಬ್ಯಾಂಕುಗಳ ಸರ್ವತೋಮುಖ ಅಭಿವೃದ್ಧಿಗಾಗಿ ಸಹಕಾರ ಸಂಘಗಳ ಪ್ರಧಾನ ವ್ಯವಸ್ಥಾಪಕರು, ವ್ಯವಸ್ಥಾಪಕರು ಹಾಗೂ ಅಧಿಕಾರಿ ವರ್ಗದವರಿಗೆ ಒಂದು ದಿನದ ಹೈಟೆಕ್ ರಾಜ್ಯಮಟ್ಟದ ವಿಶೇಷ ಕಾರ್ಯದಕ್ಷತೆ ತರಬೇತಿ ಶಿಬಿರವನ್ನು ಇಲ್ಲಿನ ಪಿ.ಬಿ.ರಸ್ತೆಯಲ್ಲಿರುವ ಹೋಟೆಲ್ ಸಾಯಿ ಇಂಟರ್‌ನ್ಯಾಷನಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕೆ ಮಹಾಮಂಡಳದ ಅಧ್ಯಕ್ಷ ಡಾ.ಬಿ.ಡಿ.ಭೂಕಾಂತ್ ಉದ್ಘಾಟಿಸಲಿದ್ದು, ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತದ ಅಧ್ಯಕ್ಷ ಸಿರಿಗೆರೆ ರಾಜಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಶಾಮನೂರು ಶಿವಶಂಕರಪ್ಪ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಜೆ.ಆರ್.ಷಣ್ಮುಖಪ್ಪ, ಪಟ್ಟಣ ಸಹಕಾರ ಬ್ಯಾಂಕುಗಳ ಒಕ್ಕೂಟದ ಅಧ್ಯಕ್ಷ ಕೋಗುಂಡಿ ಬಕ್ಕೇಶಪ್ಪ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಆರ್.ರಾಮರೆಡ್ಡಿ, ಮಹಾಮಂಡಳದ ನಿರ್ದೇಶಕ ಎ.ಸಿ.ನಾಗರಾಜ್ ಮತ್ತಿತರರು ಮುಖ್ಯತಿಥಿಗಳಾಗಿ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ವ್ಯವಸ್ಥಾಪಕ ನಿರ್ದೇಶಕ ಎಸ್.ಅರಳಿ ಸೂರ್ಯಕಾಂತ್, ಮಹಾಮಂಡಳದ ಕಾರ್ಯದರ್ಶಿ ಲಕ್ಷ್ಮೀಪತಯ್ಯ ,ಸಹಕಾರ ಸಂಘಗಳ ಉಪ ನಿಬಂಧಕರಾದ ಹೆಚ್.ಅನ್ನಪೂರ್ಣ, ಸಹಾಯಕ ನಿಬಮಧಕ ಹೆಚ್.ಎಸ್.ಸತೀಶ್ ಭಾಗವಹಿಸಲಿದ್ದಾರೆ ಎಂದು ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತದ ಪ್ರಭಾರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಹೆಚ್.ಸಂತೋಷ್ ಕುಮಾರ್, ವ್ಯವಸ್ಥಾಪಕ ಕೆ.ಎಂ.ಜಗದೀಶ್ ತಿಳಿಸಿದ್ದಾರೆ.