ರಾಜ್ಯಾದ್ಯಂತ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ನಾಳೆಯಿಂದ ಜಾರಿ ಆದೇಶದ ಸಂಪೂರ್ಣ ಮಾಹಿತಿ ಓದಿ

ರಾಜ್ಯಪಾಲರ ಉಪಸ್ಥಿತಿಯಲ್ಲಿ ನಡೆದ ಸಭೆಯ ಬಳಿಕ ನಿರ್ಧಾರ ಕೈಗೊಂಡಿರುವ ಸರ್ಕಾರ 14 ದಿನಗಳ ವರೆಗೆ ಜಾರಿಗೆ ಬರುವಂತೆ ಈ ಘೋಷಣೆ ಮಾಡಿದೆ.
ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಿದೆ. ಈ ಮೂಲಕ ಹೊಸ ಮಾರ್ಗಸೂಚಿಯಲ್ಲಿ 14 ದಿನಗಳ ವರೆದೆ ರಾಜ್ಯಾಧ್ಯಂತ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿದಂತ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು, ನಾಳೆಯಿಂದ ಮೇ.4ರವರೆಗೆ ಜಾರಿಗೆ ಬರುವಂತೆ 14 ದಿನಗಳ ಕಾಲ ರಾಜ್ಯಾಧ್ಯಂತ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಬಾರ್ ಮತ್ತು ರೆಸ್ಟೋರೆಂಟ್ ಬಂದ್ ಮಾಡಲಾಗಿದೆ. ಆದ್ರೇ ಪಾರ್ಸಲ್ ಗೆ ಅವಕಾಶ ನೀಡಲಾಗಿದೆ ಎಂದರು.
ಮದುವೆಗೆ 50 ಜನರಿಗೆ, ಅಂತ್ಯಕ್ರಿಯೆಗೆ 20 ಜನರಿಗೆ ಮಾತ್ರವೇ ಅವಕಾಶ ನೀಡಲಾಗಿದೆ. ಎಲ್ಲಾ ಇ ಕಾಮರ್ಸ್ ಚಟುವಟಿಕೆಗೆ ಅವಕಾಶ ನೀಡಲಾಗಿದೆ. ಸಿನಿಮಾ ಹಾಲ್, ಸ್ವಿಮ್ಮಿಂಗ್ ಫೂಲ್, ಮಾರ್ಕೆಟ್ ಬಂದ್ ಮಾಡಲಾಗುತ್ತಿದೆ. ಶಾಲಾ-ಕಾಲೇಜು ಮುಚ್ಚಲಾಗುತ್ತಿದೆ. ರಾತ್ರಿ ಪಾಳಿಯಲ್ಲಿ ಕಾರ್ಖಾನೆಗಳಲ್ಲಿ ಕೆಲಸ ಮಾಡೋದಕ್ಕೆ ಅವಕಾಶ ನೀಡಲಾಗಿದೆ ಎಂದರು.
ರಾತ್ರಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬಸ್ ನಲ್ಲಿ ತೆರಳೋರು ಟಿಕೆಟ್ ತೋರಿಸಿ ಸಾಗಬೇಕು. ರಾಜ್ಯಾಧ್ಯಂತ ಧಾರ್ಮಿಕ ಕ್ಷೇತ್ರಗಳು ಬಂದ್ ಮಾಡಲಾಗುತ್ತಿದೆ. ಭಕ್ತರಿಗೆ ಅವಕಾಶವಿಲ್ಲ. ಸಲೂನ್, ಬ್ಯೂಟಿ ಪಾರ್ಲರ್ ಗೆ ಅವಕಾಶ ನೀಡಲಾಗಿದೆ. ಸರ್ಕಾರಿ ಕಚೇರಿಯಲ್ಲಿ ಶೇ.50ರಷ್ಟು ಜನರಿಗೆ ಕೆಲಸ ಮಾಡೋದಕ್ಕೆ ಅವಕಾಶ ನೀಡಲಾಗುತ್ತಿದೆ ಎಂದರು.
ಗಮನ ಸೆಳೆದ ಸರ್ವಪಕ್ಷ ಸಭೆ:
ರಾಜ್ಯದಲ್ಲಿ ಕೊರೋನಾ ವೈರಾಣು ವ್ಯಾಪಕವಾಗಿ ಹರಡುತ್ತಿದ್ದು, ಸೋಂಕಿಗೆ ಅಸಂಖ್ಯ ಜನ ಬಲಿಯಾಗಿದ್ದಾರೆ. ನಿತ್ಯವೂ ರಾಜ್ಯದಲ್ಲಿ ಸಾವಿರಾರು ಜನರು ಸೋಂಕಿಗೊಳಗಾಗಿತ್ತಿದ್ದು, ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರ ಉಪಸ್ಥಿತಿಯಲ್ಲಿ ಸಂಜೆ ನಡೆದ ವಿಧಾನ ಮಂಡಲದ ಉಭಯ ಸದನಗಳ ಪ್ರಮುಖರ ಸಭೆ ಗಮನಸೆಳೆಯಿತು.
ಬೆಂಗಳೂರು ಸಹಿತ ರಾಜ್ಯದ ಪ್ರಮುಖ ನಗರಗಳಲ್ಲಿ ಕಠಿಣ ನಿಯಮ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ರಾಜಧಾನಿ ನಗರಿ ಬೆಂಗಳೂರಿನಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಹಾಗಾಗಿ ಸಿನಿಮಾ ಮಂದಿರಗಳು, ಬಾರ್-ಪಬ್‌ಗಳ ಸಹಿತ ಪ್ರಮುಖ ಉದ್ದಿಮೆ ಕೇಂದ್ರಗಳ ಚಟುವಟಿಕೆಗಳಿಗೆ ಅಂಕುಶ ಹಾಕಬೇಕೆಂಬ ಆಗ್ರಹ ಕೇಳಿಬಂತು. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಸಹಿತ ಹಲವು ಮುಖಂಡರು ಲಾಕ್‌ಡೌನ್‌ನಂತಹಾ ಕಠಿಣ ನಿಯಮ ಜಾರಿಗೆ ಸಲಹೆ ಮಾಡಿದರು. ಈ ಸಲಹೆಗಳನ್ನು ಪರಿಗಣಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಈ ಸಭೆಯಲ್ಲಿ ಭರವಸೆ ನೀಡಿದರು. ಅದಾಗಲೇ ಸಭೆಯ ಅಧ್ಯಕ್ಷತೆ ವಹಿಸಿದ ರಾಜ್ಯಪಾಲ ವಜುಬಾಯಿ ವಾಲಾ ಕೂಡಾ ಲಾಕ್‌ಡೌನ್ ಜಾರಿಗೆ ಸಲಹೆ ಮಾಡಿದರು. ಜನರು ಸಾವಿನಿಂದ ಸಾಯುವುದಿಲ್ಲ ಎಂಬ ವಿಶ್ವಾಸ ಇದೆ. ಹಾಗಾಗಿ ಲಾಕ್‌ಡೌನ್ ಮಾಡೋದಾದ್ರೆ ಮಾಡಿ ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿದರು.
ಆದರೆ ರಾತ್ರಿ ದೇಶವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರು ಲಾಕ್‌ಡೌನ್ ಕೊನೆಯ ಅಸ್ತ್ರವಾಗಲಿ ಎಂದು ಸಲಹೆ ಮಾಡಿದ ಹಿನ್ನೆಲೆಯಲ್ಲಿ ಬಿಎಸ್‌ವೈ ಸರ್ಕಾರ ನೈಟ್ ಕರ್ಫ್ಯೂ ಜೊತೆಗೆ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಿದೆ.