ಪ್ರಚಾರದಲ್ಲಿದ್ದ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಟ: ತಲೆಗೆ ಗಾಯ

ಪ್ರಚಾರದಲ್ಲಿದ್ದ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಟ: ತಲೆಗೆ ಗಾಯ

ಕೊರಟಗೆರೆ: ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ. ಪರಮೇಶ್ವರ್ ಅವರ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಅವರ ತಲೆಗೆ ಗಾಯವಾಗಿ ರಕ್ತ ಸೋರಿಕೆಯಾಗಿದೆ.

ತಾಲೂಕಿನ ಭೈರೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರಚಾರದ ವೇಳೆಯಲ್ಲಿ ಡಾ. ಜಿ. ಪರಮೇಶ್ವರ್ ಅವರನ್ನು ಎತ್ತಿಕೊಂಡು ಕಾರ್ಯಕರ್ತರು ಕುಣಿಯುತ್ತಿದ್ದಾಗ ಗುಂಪಿನಲ್ಲಿದ್ದ ದುಷ್ಕರ್ಮಿ ಕಲ್ಲು ತೂರಾಟ ನಡೆಸಿರುವುದಾಗಿ ವರದಿಯಾಗಿದೆ.

ಕೂಡಲೇ ಅವರನ್ನು ಅಕ್ಕಿರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ತುಮಕೂರಿನ ಸಿದ್ದಾರ್ಥ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಚಾರದ ಕಣ ತಾರಕಕ್ಕೇರಿದ್ದು, ಕೆಲವು ಕಡೆಗಳಲ್ಲಿ ಅಹಿತಕರ ಘಟನೆಗಳು ನಡೆಯುತ್ತಿವೆ.

 

Leave a Reply

Your email address will not be published. Required fields are marked *

error: Content is protected !!