ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲುತೂರಿದ ಕ್ರಮ ಸರಿಯಲ್ಲ: ವೆಂಕಟೇಶ್

ದಾವಣಗೆರೆ: ಶಿಕಾರಿಪುರದಲ್ಲಿನ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸದ ಮೇಲೆ ಬಂಜಾರ ಸಮುದಾಯದವರು ಕಲ್ಲು ತುರಾಟ ನಡೆಸಿರುವುದನ್ನು ವಕೀಲರಾದ ಕೊಡಗನೂರು ಕೆ.ಹೆಚ್. ವೆಂಕಟೇಶ್ ತೀವ್ರವಾಗಿ ಖಂಡಿಸಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ವೇಳೆ ಪ್ರಥಮವಾಗಿ ರಾಜ್ಯದಲ್ಲಿ ಬಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಿ ಅನುದಾನ ನೀಡಿದ್ದರು.
ಮುಖ್ಯಮಂತ್ರಿ ಬೊಮ್ಮಾಯಿ ಅವರು ಎಸ್ಸಿ ಮೀಸಲಾತಿ ಹೆಚ್ಚಿಸಿ, ಒಳ ಮೀಸಲಾತಿ ಕಲ್ಪಿಸಿದ್ದಾರೆ.ಬಂಜಾರ ಸಮುದಾಯಕ್ಕೆ ಒಳಮೀಸಲಾತಿಯಲ್ಲಿ ಅನ್ಯಾಯವಾಗಿದ್ದರೆ ಮುಖ್ಯಮತ್ರಿ ಹಾಗೂ ಸಮಾಜದ ಮುಖಂಡರ ಜೊತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕೇ ಹೊರತು, ಮನೆ ಮೇಲೆ ಕಲ್ಲು ತೂರಿರುವ ಕ್ರಮ ಸರಿಯಲ್ಲ ಎಂದು ಹೇಳಿದರು.