ದಾವಣಗೆರೆ: ಧಾರವಾಡ ಮತ್ತು ಬೆಂಗಳೂರು ನಗರಗಳ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರನ್ನು ರೈಲ್ವೆ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಅಪ್ರಾಪ್ತರನ್ನು ಚಿತ್ರದುರ್ಗದ ವೀಕ್ಷಣಾ ಕೇಂದ್ರದಲ್ಲಿ ಇರಿಸಲಾಗಿದೆ ಎಂದು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಅಧಿಕಾರಿಗಳು ತಿಳಿಸಿದ್ದಾರೆ.
ಬಾಲಕರು ಎಸ್.ಎಸ್.ನಗರ ಮತ್ತು ಬಾಷಾ ನಗರದ ನಿವಾಸಿಗಳು. ಜುಲೈ 1 ರಂದು ಈ ಘಟನೆ ನಡೆದಿತ್ತು. ಬಾಲಕರು ಕಲ್ಲು ತೂರಾಟ ನಡೆಸಿದ್ದರಿಂದ ರೈಲಿನ ಕಿಟಕಿ ಗಾಜು ಬಿರುಕು ಬಿಟ್ಟಿತ್ತು.
