ದಾವಣಗೆರ: ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಮಾತನಾಡಿ ದಾವಣಗೆರೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿಗಳು ನಡೆಯುತ್ತಿದ್ದು ಕೆಲವು ಕಡೆ ಅವೈಜ್ಞಾನಿಕವಾಗಿ ಮತ್ತು ಗುಣಮಟ್ಟದ ಕೊರತೆಯುಳ್ಳ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.
ಈ ಕಾಮಗಾರಿಗಳನ್ನು ಪರಿಶೀಲಿಸುವವರೆಗೂ ಗುತ್ತಿಗೆದಾರರಿಗೆ ಹಣ ಪಾವತಿ ಮಾಡದೆ ತಡೆಹಿಡಿಯಲು ಸೂಚಿಸಿದ ಸಚಿವರು ಕೊಡಗನೂರು ಕೆರೆ ಕಳೆದ ಮುಂಗಾರಿನಲ್ಲಿ ಏರಿ ಕುಸಿದಿದ್ದು ಮೂರು ಭಾರಿ ಇದೇ ರೀತಿಯಾಗಿದೆ. ಆದರೆ ರಿಪೇರಿಗೆಂದು ಕೋಟ್ಯಾಂತರ ರೂ.ಗಳನ್ನು ವ್ಯಯ ಮಾಡಿದ್ದರೂ ಗುಣಮಟ್ಟದ ಕಾಮಗಾರಿ ಮಾಡಿಲ್ಲ, ಕೂಲಂಕುಷವಾಗಿ ಪರಿಶೀಲಿಸಲು ಜಿಲ್ಲಾಧಿಕಾರಿಗೆ ತಿಳಿಸಿದರು.
