ವಿದ್ಯಾರ್ಥಿ-ಪೊಲೀಸ್ ಅನುಭವ ತರಬೇತಿ ಉದ್ಘಾಟನೆ
ದಾವಣಗೆರೆ: ಹೈಸ್ಕೂಲ್ ಮೈದಾನದ ಬಳಿ ಇರುವ ಬಡಾವಣೆ ಪೊಲೀಸ್ ಠಾಣೆ ಆವರಣದಲ್ಲಿ ಬುಧವಾರ ಜಿಲ್ಲಾ ಪೊಲೀಸ್ ಹಾಗೂ ದಾವಣಗೆರೆ ವಿವಿ ಎನ್‌ಎಸ್‌ಎಸ್ ವಿಭಾಗದ ಸಹಯೋಗದಲ್ಲಿ ಪದವಿ ವಿದ್ಯಾರ್ಥಿಗಳಿಗಾಗಿ Student Police Experiential programme (ವಿದ್ಯಾರ್ಥಿ-ಪೊಲೀಸ್ ಅನುಭವ ತರಬೇತಿ) ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಎಸ್ಪಿ ಶ್ರೀಮತಿ ಉಮಾ ಪ್ರಶಾಂತ್ ಕಾರ್ಯಕ್ರಮ ಉದ್ಘಾಟಿಸಿದರು. ದಾವಣಗೆರೆ ವಿವಿ ವಿಧಿ ವಿಜ್ಞಾನ ವಿಭಾಗ, ಅಪರಾಧ ಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ನಟರಾಜ್ ಹಾಗೂ ದಾವಿವಿ ಎನ್‌ಎಸ್‌ಎಸ್ ವಿಭಾಗದ ಸಂಯೋಜನಾಧಿಕಾರಿ ಅಶೋಕ್ ಕುಮಾರ್ ಪಾಳೇದ ಉಪನ್ಯಾಸ ನೀಡಿದರು.
ಡಿವೈಎಸ್ಪಿ ಪ್ರಶಾಂತ್ ಮನೋಳಿ ಉಪಸ್ಥಿತರಿದ್ದರು. ದೇವರಾಜ್ ಸಂಗೇನಹಳ್ಳಿ ನಿರೂಪಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯ ಕುಮಾರ ಸಂತೋಷ್ ಸ್ವಾಗತಿಸಿದರು. ನಗರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಮಲ್ಲೇಶ್ ದೊಡ್ಡಮನಿ ವಂದಿಸಿದರು.