Students: ವಿದ್ಯಾರ್ಥಿಗಳ ಭವಿಷ್ಯ ಗುರಿಯತ್ತ ಇರಲಿ – ಡಾ. ವೆಂಕಟೇಶ್ ಬಾಬು

ದಾವಣಗೆರೆ: (Students) ದಾವಣಗೆರೆ ನಗರದ ವಿಜಯ ಪ್ಯಾರಾ ಮೆಡಿಕಲ್ ಕಾಲೇಜಿನ “ಅದ್ವಯ 2K25” ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ದಾವಣಗೆರೆಯ ರೋಟರಿ ಕ್ಲಬ್ ಸಭಾಂಗಣದಲ್ಲಿ ಮಂಗಳವಾರದಂದು ವಿಜೃಂಭಣೆಯಿಂದ ನೆರವೇರಿತು. ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಖ್ಯಾತ ಭಾಷಣಕಾರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ವೆಂಕಟೇಶ್ ಬಾಬು ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರೇರಣಾದಾಯಕ ಭಾಷಣ ಮಾಡಿದರು.
ಡಾ. ವೆಂಕಟೇಶ್ ಬಾಬು ತಮ್ಮ ಭಾಷಣದಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಬೆಳಕು ಚೆಲ್ಲುತ್ತಾ, ಪ್ರತಿಯೊಬ್ಬ ವಿದ್ಯಾರ್ಥಿಗೆ ಸ್ಪಷ್ಟವಾದ ಗುರಿ ಇರಬೇಕು. ಕಠಿಣ ಪರಿಶ್ರಮ, ಸಮರ್ಪಣಾ ಭಾವನೆ ಹಾಗೂ ಶಿಸ್ತಿನಿಂದ ಮಾತ್ರ ಯಶಸ್ಸನ್ನು ಸಾಧಿಸಬಹುದು ಎಂಬುದನ್ನು ಒತ್ತಿಹೇಳಿದರು. “ಸಾಮಾನ್ಯ ವಿದ್ಯಾರ್ಥಿಯೂ ಸರಿಯಾದ ಮಾರ್ಗದರ್ಶನ ಮತ್ತು ಪರಿಶ್ರಮದಿಂದ ತನ್ನ ಗುರಿಗಳನ್ನು ಸಾಕಾರಗೊಳಿಸಬಹುದು” ಎಂದು ಅವರು ತಮ್ಮ ಅನುಭವಗಳನ್ನೂ ಹಂಚಿಕೊಂಡರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾಕ್ಟರ್ ರಾಕೇಶ್ ಶ್ರೀಹರಿ ಅವರು ಮಾತನಾಡುತ್ತಾ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳಿಗೆ ಇರುವ ವಿವಿಧ ಅವಕಾಶದ ಕುರಿತು ತಿಳಿಸಿದರು.
ಈ ಸಂಧರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿಜಯಕುಮಾರ್ ಮಾತನಾಡುತ್ತಾ ಕಾಲೇಜಿನಲ್ಲಿ ಇತರಹದ ಕಾರ್ಯಕ್ರಮಗಳು ನಿರಂತರವಾಗಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಹೋರ ತೆಗೆಯಲು ಸಹಕಾರವಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು ಕಾಲೇಜಿನ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.