ಟಿಕೆಟ್ ನೀಡದ್ದಕ್ಕೆ ಸುಳ್ಯ ಶಾಸಕ ಅಂಗಾರ ರಾಜಕೀಯ ನಿವೃತ್ತಿ

ಟಿಕೆಟ್ ನೀಡದ್ದಕ್ಕೆ ಸುಳ್ಯ ಶಾಸಕ ಅಂಗಾರ ರಾಜಕೀಯ ನಿವೃತ್ತಿ

ದಕ್ಷಿಣ ಕನ್ನಡ : ಬಿಜೆಪಿ ಹೈಕಮಾಂಡ್‌ ಟಿಕೆಟ್‌ ನಿರಾಕರಿಸಿರುವ ಕಾರಣ ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್‌.ಅಂಗಾರ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ಮಂಗಳವಾರ ತಮ್ಮ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಟಿಕೆಟ್‌ ನೀಡದಿರುವ ಕುರಿತು ನನಗೆ ಅಸಮಾಧಾನ ಇಲ್ಲ. ಆದರೆ, ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಮಾಡಿರುವ ಕೆಲಸವನ್ನು ಗೌರವಿಸುವ ಕ್ರಮ ಇದಲ್ಲ ಎಂದರು.

ಪ್ರಾಮಾಣಿಕ ರಾಜಕಾರಣಕ್ಕೆ ಈಗ ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು ಎಂದು ಹೇಳಿದರು.

ನಾನು ಇನ್ನು ರಾಜಕಾರಣದಲ್ಲಿ ಇರಲ್ಲ. ಚುನಾವಣಾ ಪ್ರಚಾರವನ್ನೂ ಮಾಡುವುದಿಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು  ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!