ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ, ಮಗನ ಮದುವೆಗೆ ಆಹ್ವಾನಿಸಿದ ಸುಮಲತಾ..
ನವದೆಹಲಿ: ಸಂಸದೆ ಸುಮಲತಾ ಅಂಬರೀಷ್ ಮತ್ತು ಪುತ್ರ ಅಭಿಷೇಕ್ ಪ್ರಧಾನಿ ನರೇಂದ್ರ ಮೋದಿಯವರನ್ನ ಭೇಟಿ ಮಾಡಿದ್ದಾರೆ. ಅಭಿಷೇಕ್ ಅಂಬರೀಷ್ ಮದುವೆ ಇದ್ದು, ಮದುವೆಗೆ ಬರಬೇಕೆಂದು, ಮೋದಿಗೆ ಆಹ್ವಾನ ಪತ್ರ ಕೊಟ್ಟು ಆಹ್ವಾನಿಸಲಾಗಿದೆ.
ಈ ಫೋಟೋವನ್ನ ಸುಮಲತಾ ಅಂಬರೀಷ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ಈ ರೀತಿ ಬರೆದುಕೊಂಡಿದ್ದಾರೆ. ವಿಶ್ವದ ಅತ್ಯಂತ ಜನಪ್ರಿಯ ಮತ್ತು ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ. ದೇಶದ ಪ್ರಗತಿಗಾಗಿ ಸದಾ ಸಮರ್ಪಣಾ ಮನೋಭಾವ ಹೊಂದಿರುವ ನಾಯಕ. ಪುತ್ರ ಅಭಿಷೇಕ್ ಅಂಬರೀಶ್ ಅವರು ಆಶೀರ್ವಾದ ಪಡೆಯುವಂತಹ ಸೌಭಾಗ್ಯ ಸಿಕ್ಕಿದೆ.
ಪ್ರಧಾನ ಮಂತ್ರಿ ಅವರ ಸಮರ್ಥ ನಾಯಕತ್ವದಲ್ಲಿ. ಭಾರತವು ಭವಿಷ್ಯದಲ್ಲಿ ಇನ್ನೂ ಮಹತ್ತರವಾದ ಹೆಜ್ಜೆಗಳನ್ನು ಇಡಲಿದೆ ಎನ್ನುವ ವಿಶ್ವಾಸ ನನ್ನದು. ಭಾರತಕ್ಕೆ ಮತ್ತು ಕರ್ನಾಟಕಕ್ಕೆ ಇಂತಹ ಭರವಸೆಯ ನಾಯಕರು. ಹಾಗೂ ನಾಯಕತ್ವ ಅಗತ್ಯವಿದೆ ಎನ್ನುವ ದೃಢವಾದ ನಂಬಿಕೆ ನನ್ನದು.
ಅಭಿಷೇಕ್ ಅಂಬರೀಶ್ ಅವರ ಮದುವೆಗೆ ಆಗಮಿಸುವಂತೆ ಅವರನ್ನು ಭೇಟಿ ಮಾಡಿ ಆಮಂತ್ರಣ ಪತ್ರಿಕೆ ನೀಡಿ ಆಶೀರ್ವಾದ ಪಡೆಯಲಾಯಿತು ಇದೇ ಸಂದರ್ಭದಲ್ಲಿ ರಾಜ್ಯದ ಮತ್ತು ನನ್ನ ಮಂಡ್ಯ ಕ್ಷೇತ್ರದ ಬಗ್ಗೆ ಹಲವು ವಿಚಾರಗಳನ್ನು ಚರ್ಚಿಸಲಾಯಿತು ಮಾನ್ಯ ಪ್ರಧಾನಿಗಳು ಮಂಡ್ಯಕ್ಕೆ ಬಂದಾಗ ನನ್ನ ಸ್ವಾಭಿಮಾನಿ ಜನತೆ ಅವರನ್ನು ಬರಮಾಡಿಕೊಂಡ ರೀತಿಯನ್ನು ನೆನಪಿಸಿಕೊಂಡು ಶ್ಲ್ಯಾಘಿಸಿದರು. ಮಂಡ್ಯ ಹಾಗೂ ಕರ್ನಾಟಕದ ಬಗ್ಗೆ ಅವರಿಗಿರುವ ಅಪಾರವಾದ ಅಭಿಮಾನಕ್ಕೆ ನನ್ನ ತುಂಬು ಹೃದಯದ ಧನ್ಯವಾದಗಳು ಎಂದು ಸುಮಲತಾ ಹೇಳಿದ್ದಾರೆ.