ಬಿ.ಎಸ್.ಯಡಿಯೂರಪ್ಪ ಅವರಿಗೆ ‘ಕೊರೊನಾ ಸೂಪರ್ ವಾರಿಯರ್’ ಪ್ರಶಸ್ತಿ ಪ್ರಧಾನ
ದಾವಣಗೆರೆ: ಹೊನ್ನಾಳಿ ವಿಧಾನಸಭಾ ಕ್ಷೇತ್ರದ ನ್ಯಾಮತಿಯಲ್ಲಿ ಕೊರೊನಾ ವಾರಿಯರ್ಸ್ ಮತ್ತು ಯೋಧರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ‘ಕೊರೊನಾ ಸೂಪರ್ ವಾರಿಯರ್’ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಂಸದ ಡಾ. ಜಿ.ಎಂ.ಸಿದ್ದೇಶ್ವರ ಸೇರಿದಂತೆ ಸಚಿವದ್ವಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಶಸ್ತಿ ಪ್ರದಾನ ಮಾಡಿದರು.
ಇದೇ ವೇಳೆ ಕೋವಿಡ್ ಎರಡನೇ ಅಲೆಯಲ್ಲಿ ಕಾರಗಯ ನಿರ್ವಹಿಸಿದ್ದ ವಿವಿಧ ಇಲಾಖೆಯ 5,500 ಕೊರೊನಾ ವಾರಿಯರ್ಸಗಳಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರು ಸೀರೆಯನ್ನು ಉಡುಗೊರೆಯಾಗಿ ನೀಡಿದರು.
ಕೊರೊನಾ ವಾರಿಯರ್ಸಗಳಿಗೆ ಹೂಮಳೆ ಸುರಿಸಿ ಅಭಿನಂದನೆ ಸಲ್ಲಿಸಿದರು. ಕೊರೊನಾ ವಾರಿಯರ್ಸ ಸೇರಿದಂತೆ 15 ಸಾವಿರ ಜನರಿಗೆ ಹೋಳಿಗೆ ಊಟ ಮಾಡಿಸಿ, ಪ್ರತಿಯೊಬ್ಬರಿಗೂ ತಾವೇ ತಮ್ಮ ಕೈಯಾರ ಹೋಳಿಗೆ ಊಟ ಬಡಿಸಿ ರೇಣುಕಾಚಾರ್ಯ ಆ ಮೂಲಕ ಅಭಿನಂದಿಸಿದರು.
ರೇಣುಕಾಚಾರ್ಯ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ಯತವಾಗಿದ್ದಷ್ಟೆ ಅಲ್ಲ. ಇಂತಹ ಶಾಸಕರು ನಮ್ಮ ಕ್ಷೇತ್ರಕ್ಕೆ ಬೇಕಿದೆ. ಇವರು ನೂರು ಕಾಲ ಸುಖವಾರಿರಲೆಂದು ಹರಿಸಿ, ಹಾರೈಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ|| ಕೆ.ಸುಧಾಕರ್, ಸಿ.ಎಂ. ರಾಜಕೀಯ ಕಾರ್ಯದರ್ಶಿಗಳು ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಡಾ|| ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಶಾಸಕರಾದ ಪ್ರೊ. ಲಿಂಗಣ್ಣ, ವಿಧಾನ ಪರಿಷತ್ ಸದಸ್ಯರಾದ ಆಯನೂರ್ ಮಂಜುನಾಥ್, ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.