ಮಹಾನಗರ ಪಾಲಿಕೆಯಿಂದ ದಾವಣಗೆರೆಯ ವಿವಿಧ ಶಾಲಾ ಮಕ್ಕಳಿಂದ ಪ್ರತಿಜ್ಞಾವಿಧಿ ಬೋಧನೆ

pratigne

ದಾವಣಗೆರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಹಾನಗರ ಪಾಲಿಕೆ ವತಿಯಿಂದ ಶಾಲಾ ಮಕ್ಕಳಿಗೆ ಪರಿಸರ ರಕ್ಷಣೆಯ ಬಗ್ಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ದಾವಣಗೆರೆ ನಗರದ ವಿವಿಧ ಶಾಲೆಗಳಲ್ಲಿ ಏಕಕಾಲಕ್ಕೆ ಸಾವಿರಾರು ವಿದ್ಯಾರ್ಥಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಿರಮಗೊಂಡನಹಳ್ಳಿಯ ಅನ್ಮೋಲ್ ಪಬ್ಲಿಕ್ ಶಾಲೆಯಲ್ಲಿ ಮಹಾಪೌರರಾದ ಜಯಮ್ಮ ಆರ್ ಗೋಪಿನಾಥ್‌ನಾಯ್ಕ ಮಾಡಿದರು. ಈ ವೇಳೆ ಮಾತನಾಡಿದ ಅವರು, ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ. ಗಿಡಮರಗಳನ್ನು ಬೆಳೆಸಿದರೆ ಸಮೃದ್ದಿ ವಾತಾವರಣ ನಿರ್ಮಾಣವಾಗುತ್ತದೆ. ಚಿಕ್ಕ ವಯಸ್ಸಿನಿಂದಲೇ ಪರಿಸರ ಪ್ರೇಮವನ್ನು ಬೆಳೆಸಿಕೊಳ್ಳಬೇಕು ಎಂದು ಮಕ್ಕಳಿಗೆ ಕರೆ ನೀಡಿದರು.

ಕಾರ್ಯಕ್ರಮದ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಮಹಾನಗರ ಪಾಲಿಕೆಯ ಜೀವವೈವಿಧ್ಯ ನಿರ್ವಹಣಾ ಸಮಿತಿಯ ಸದಸ್ಯರಾಗಿರುವ ಗಿರೀಶ್ ದೇವರಮನಿ ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಬೇಕಾದರೆ ಹಲವಾರು ಕಾರ್ಯಕ್ರಮಗಳು ನಡೆಯಬೇಕು. ಮಕ್ಕಳಲ್ಲಿ ಪರಿಸರ ರಕ್ಷಿಸುವ ಮನೋಭಾವ ಬೆಳೆಯಬೇಕಾಗಿದೆ. ಮಹಾನಗರ ಪಾಲಿಕೆಯಿಂದ ಹಮ್ಮಿಕೊಂಡಿರುವ ಪರಿಸರ ಜಾಗೃತಿ ಪ್ರತಿಜ್ಞಾ ವಿಧಿ ಬೋಧನೆ ಸ್ವೀಕಾರ ಕಾರ್ಯಕ್ರಮದಲ್ಲಿ ಏಕಕಾಲಕ್ಕೆ ವಿವಿಧ ಶಾಲೆಗಳಿಂದ ಸಾವಿರಾರು ಮಕ್ಕಳು ಪಾಲ್ಗೊಳ್ಳುತ್ತಿರುವುದು ಸಂತೋಷದ ವಿಷಯವಾಗಿದೆ ಎಂದರು. ಎ0. ಗುರುಸಿದ್ಧಸ್ವಾಮಿ ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಜೀವ ವೈವಿಧ್ಯ ನಿರ್ವಹಣಾ ಸಮಿತಿಯ ಸದಸ್ಯರಾದ ರೋಹಿಣಿ, ಅಭಿಯಂತರರಾದ ಜಗದೀಶ್ ಎಸ್.ಆರ್, ಬಸವಣ್ಣ, ನಾಗರಾಜ್ ಸುರ್ವೆ, ಪ್ರಸನ್ನ ಬೆಳಕೆರೆ, ಶಾಲೆಯ ಪ್ರಾಂಶುಪಾಲರಾದ ಕೊಟ್ರೇಶ್ ಇದ್ದರು.

garudavoice21@gmail.com 9740365719

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!