ಜುಲೈ ೨೯, ೩೦ ರಂದು ಕಲಾಕುಂಚದಿಂದ ಕನ್ನಡ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಜುಲೈ ೨೯, ೩೦ ರಂದು ಕಲಾಕುಂಚದಿಂದ ಕನ್ನಡ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ೨೦೨೨-೨೩ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡದಲ್ಲಿ ಅತೀ ಹೆಚ್ಚು ಅಂಕ ಪಡೆದ ಪ್ರತಿಭಾವಂತ ಮಕ್ಕಳಿಗೆ ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಪುರಸ್ಕಾರ ಸಮಾರಂಭವನ್ನು ಜುಲೈ ೨೯ ಶನಿವಾರ ಮತ್ತು ೩೦ ಭಾನುವಾರ ನಗರದ ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.

೧೨೫ಕ್ಕೆ ೧೨೦ ರಿಂದ ೧೨೪ ರವರೆಗೆ ಅಂಕ ಪಡೆದ ಮಕ್ಕಳಿಗೆ ದಾವಣಗೆರೆ ಜಿಲ್ಲಾ ಮಟ್ಟದಲ್ಲಿ “ಕನ್ನಡ ಕುವರ-ಕುವರಿ’ ಜಿಲ್ಲಾ ಪ್ರಶಸ್ತಿ, ಪ್ರಥಮ ಭಾಷೆ ಕನ್ನಡದಲ್ಲಿ ೧೨೫ಕ್ಕೆ ೧೨೫ ಪರಿಪೂರ್ಣ ಅಂಕ ಪಡೆದ ಮಕ್ಕಳಿಗೆ ರಾಜ್ಯ ಮಟ್ಟದ “ಕನ್ನಡ ಕೌಸ್ತುಭ” ರಾಜ್ಯ ಪ್ರಶಸ್ತಿ, ಒಟ್ಟು ಅಂಕ ೬೨೫ ಕ್ಕೆ ೬೦೦ ಕ್ಕೂ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಕರ್ನಾಟಕ ರಾಜ್ಯ ವ್ಯಾಪ್ತಿಯಲ್ಲಿ “ಸರಸ್ವತಿ ಪುರಸ್ಕಾರ’’, ರಾಜ್ಯ ಪ್ರಶಸ್ತಿಯೊಂದಿಗೆ ಕನ್ನಡ ತಿಲಕವಿಟ್ಟು, ಕನ್ನಡ ಕಂಕಣ ಕಟ್ಟಿ, ಕನ್ನಡಾರತಿ ಬೆಳಗಿ, ಮಂಗಳ ವಾದ್ಯ, ಪೂರ್ಣಕುಂಭ ಸ್ವಾಗತದೊಂದಿಗೆ ಮೆರವಣಿಗೆಯಲ್ಲಿ ಬರಮಾಡಿಕೊಂಡು ವೇದಿಕೆಯಲ್ಲಿ ಪ್ರತ್ಯೇಕ ಸಿಂಹಾಸನದ ಮೇಲೆ ಕೂರಿಸಿ, ಮಸ್ತಕದ ಮೇಲೆ ಕಿರೀಟವಿಟ್ಟು, ಪುಷ್ಪವೃಷ್ಟಿಯೊಂದಿಗೆ ಪದಕ, ಕನ್ನಡ ತಾಯಿ ಭುವನೇಶ್ವರಿಯ ಸ್ಮರಣಿಕೆ, ಅವರದ್ದೇ ಭಾವಚಿತ್ರವಿರುವ ಸನ್ಮಾನ ಪತ್ರ ವಿತರಣೆಯೊಂದಿಗೆ ಸನ್ಮಾನಿಸಿ, ಗೌರವಿಸಲಾಗುವುದು ಎಂದು ಸಂಸ್ಥೆಯ ಗೌರವ ಅಧ್ಯಕ್ಷರಾದ ನಲ್ಲೂರು ಲಕ್ಷ್ಮಣ್ ರಾವ್ ತಿಳಿಸಿದ್ದಾರೆ.

ಜುಲೈ ೨೯, ೩೦ ರಂದು ಕಲಾಕುಂಚದಿಂದ ಕನ್ನಡ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಜುಲೈ ೨೯ ರಂದು ಶನಿವಾರ ಬೆಳಿಗ್ಗೆ ೧೦.೩೦ ಕ್ಕೆ ಖ್ಯಾತ ಹಿರಿಯ ಗಾಯಕರು, ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಕಲಾಶ್ರೀ ವೈ.ಕೆ.ಮುದ್ದುಕೃಷ್ಣ ಸಮಾರಂಭವನ್ನು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಕೆ.ಎಚ್.ಮಂಜುನಾಥ್ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಾಡಿನ ಹಿರಿಯ ಗಾಯಕರೂ, ಸಂಗೀತ ನಿರ್ದೇಶಕರಾದ ನಗರ ಶ್ರೀನಿವಾಸ್ ಉಡುಪ, ಖ್ಯಾತ ಗಾಯಕರೂ ಆದರ್ಶ ಸುಗಮ ಸಂಗೀತ ಅಕಾಡಮಿಯ ಅಧ್ಯಕ್ಷರಾದ ಡಾ. ಕಿಕ್ಕೇರಿ ಕೃಷ್ಣಮೂರ್ತಿ, ಶ್ರೀಮತಿ ಮೋತಿ ಗೌರಮ್ಮ ಮೋತಿ ಪಿ.ರಾಮರಾವ್ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಮೋತಿ ಪರಮೇಶ್ವರ ರಾವ್, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿರುತ್ತಾರೆ. ಎಂದು ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಶ್ರೀಮತಿ ಜ್ಯೋತಿ ಗಣೇಶ್‌ಶೆಣೈ ತಿಳಿಸಿದ್ದಾರೆ.

ಜುಲೈ ೩೦ ರಂದು ಭಾನುವಾರ ಬೆಳಿಗ್ಗೆ ೧೦-೩೦ಕ್ಕೆ ಅಂತರಾಷ್ಟಿçÃಯ ಖ್ಯಾತ ಪ್ರಶಸ್ತಿ ಪುರಸ್ಕೃತ ರಂಗಕರ್ಮಿ, ಚಲನಚಿತ್ರ ನಟ, ನಿರ್ದೇಶಕ ಬೆಂಗಳೂರಿನ ಟಿ.ಎಸ್.ನಾಗಾಭರಣ  ಸಮಾರಂಭ ಉದ್ಘಾಟಿಸಲಿದ್ದು, ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈಪ್ರತಿಷ್ಥಾನದ ಅಧ್ಯಕ್ಷರಾದ ಬೆಂಗಳೂರಿನ ಡಾ. ನಾಗೇಶ್ ಸಂಜೀವ ಕಿಣಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಬಿ.ವಾಮದೇವಪ್ಪ, ನಗರದ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥರಾದ ಶ್ರೀಮತಿ ಜಸ್ಟಿನ್ ಡಿ.ಸೌಜಾ ಆಗಮಿಸಲಿದ್ದು, ಶೈಕ್ಷಣಿಕ ಸಾಧಕಿ ಬೆಂಗಳೂರಿನ ಕುಮಾರಿ ಭೂಮಿಕಾ ರಮೇಶ್ ಪೈ, ಕಲಾಕುಂಚ ಮಹಿಳಾ ವಿಭಾಗದ ಗೌರವ ಅಧ್ಯಕ್ಷರಾದ ಶ್ರೀಮತಿ ವಸಂತಿ ಮಂಜುನಾಥ್ ಗೌರವ ಉಪಸ್ಥಿತರಿರುತ್ತಾರೆ.

ಎರಡೂ ದಿನಗಳ ಸಮಾರಂಭದ ಉದ್ಘಾಟನೆಯ ಮೊದಲು ನಗರದ ಭರತಾಂಜಲಿ ನೃತ್ಯ ಕಲಾ ಶಾಲೆಯ ನೃತ್ಯ ಬಾಲ ಕಲಾವಿದರಿಂದ ಸ್ವಾಗತ ಭರತನಾಟ್ಯ ನಡೆಸಿಕೊಡಲಿದ್ದಾರೆ ಎಂದು ಕಲಾಕುಂಚದ ಪ್ರಧಾನ ಕಾರ್ಯದರ್ಶಿ ಮಹದೇವ ಅಸಗೋಡು ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆ ಸೇರಿದಂತೆ ನಾಡಿನ ವಿವಿಧ ಜಿಲ್ಲೆಗಳಿಂದ ಸುಮಾರು ೯೬೫ ಪ್ರತಿಭಾವಂತ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪ್ರಶಸ್ತಿ ಪ್ರದಾನಕ್ಕೆ ಆಗಮಿಸಲಿದ್ದು ಸರ್ವ ಕನ್ನಡ ಮನಸ್ಸುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕನ್ನಡ ಮಕ್ಕಳ ವಿಜೃಂಭಣೆಯ ಸಮಾರಂಭವನ್ನು ಯಶಸ್ವಿಗೊಳಿಸಬೇಕಾಗಿ ಕಲಾಕುಂಚ, ಕಲಾಕುಂಚ ಮಹಿಳಾ ವಿಭಾಗ, ಯಕ್ಷರಂಗ ಯಕ್ಷಗಾನ ಸಂಸ್ಥೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!