teachers day; ದೇಶದಲ್ಲಿ ಶಾಂತಿ, ಸಂತೃಪ್ತಿ ಜೀವನಕ್ಕೆ ಸಂಸ್ಕಾರಯುತ ಶಿಕ್ಷಣ ಅಗತ್ಯ

ದಾವಣಗೆರೆ: ಸೆ.06:  ನಗರದ ಹದಡಿ ರಸ್ತೆಯಲ್ಲಿನ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಭಾರತ ರತ್ನ ಡಾ; ಸರ್ವಪಲ್ಲಿ ರಾಧಾಕೃಷ್ಣನ್ ರವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಲಾದ ಶಿಕ್ಷಕರ ದಿನಾಚರಣೆ (teachers day) ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪುರಸ್ಕøತರಿಗೆ ಸನ್ಮಾನ ಹಾಗೂ ದಾವಣಗೆರೆ ಉತ್ತರ, ದಕ್ಷಿಣ ವಲಯದ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಡಾ; ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪುಷ್ಪನಮನ ಸಲ್ಲಿಸಿದರು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಂತಿ ಮತ್ತು ಸಂತೃಪ್ತಿಯ ಜೀವನ ನಡೆಸಲು ಮತ್ತು ಬದುಕನ್ನು ಕಟ್ಟಿಕೊಳ್ಳಲು ಇದಕ್ಕೆ ಮೂಲ ತಳಹದಿ ಶಿಕ್ಷಣವಾಗಿದೆ. ಈ ನಿಟ್ಟಿನಲ್ಲಿ ಸಂಸ್ಕಾರಯುತ ಶಿಕ್ಷಣ ಪ್ರತಿಯೊಬ್ಬರಿಗೂ ದೊರೆಯುವುದು ಅತೀ ಮುಖ್ಯವಾದದು. ಸಂತೋಷ ಮತ್ತು ಸಂತೃಪ್ತಿಯ ಜೀವನ ಸಾಧ್ಯವಾಗಲು ಇದಕ್ಕೆ ಜ್ಞಾನ ಮತ್ತು ವಿಜ್ಞಾನದ ಸಮ್ಮಿಲನವಿರಬೇಕೆಂದು ಹೇಳಿದವರು ಡಾ; ಸರ್ವಪಲ್ಲಿ ರಾಧಾಕೃಷ್ಣನ್‍ರವರು. ಇವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಶಿಕ್ಷಣ ಕೊಟ್ಟಂತಹ ಗುರುವೃಂದಕ್ಕೆ ನಮಿಸುವ ದಿನ ಇದಾಗಿದೆ. ಆದರ್ಶ ಶಿಕ್ಷಕರಾದ ಇವರು ತಮ್ಮ ಸಾಧನೆಯ ಮೂಲಕ ಹಲವು ಹುದ್ದೆಗಳನ್ನೇರಿದರು. ಇವರ ಕೊಡುಗೆ ಎಲ್ಲರಿಗೂ ಮಾದರಿಯಾಗಿದ್ದು ಅವರ ತತ್ವ, ಸಿದ್ದಾಂತಗಳನ್ನು ವಿದ್ಯಾರ್ಥಿ ಜೀವನ, ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ತಂದುಕೊಡಬೇಕಾಗಿದೆ. ಅವರ ಜನ್ಮ ದಿನಾಚರಣೆಯನ್ನು 1962 ರ ಸೆಪ್ಟೆಂಬರ್ 5 ರಿಂದ ಆಚರಿಸುತ್ತಾ ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ ಎಂದರು.

ಸಮಾಜ, ದೇಶ ಕಟ್ಟುವಲ್ಲಿ ಶಿಕ್ಷಕರ ಜವಾಬ್ದಾರಿ ಗುರುತರವಾಗಿರುತ್ತದೆ. ಶಿಕ್ಷಕರು ತಮ್ಮ ಕರ್ತವ್ಯದಲ್ಲಿ ಉದಾಸೀನ ಮಾಡಿದರೆ ಇಡೀ ಸಮಾಜ ಮತ್ತು ದೇಶ ಹಾಳಾಗುತ್ತದೆ. ಇದನ್ನು ಅರಿತರೆ ಶಿಕ್ಷಕರ ಕರ್ತವ್ಯ ಎಷ್ಟು ಮೌಲ್ಯಯುತವಾಗಿರುತ್ತದೆ ಎಂಬುದು ತಿಳಿಯುತ್ತದೆ. ಆದ್ದರಿಂದ ಶಿಕ್ಷಕರು ಸದಾ ತಮ್ಮ ಕರ್ತವ್ಯ ಪ್ರಜ್ಞೆಯನ್ನು ಮೆರೆಯಬೇಕಾಗಿದೆ ಎಂದರು.

Rain; ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಶಿಕ್ಷಕರ ಕುಂದುಕೊರತೆಗಳ ಬಗ್ಗೆ ಶಿಕ್ಷಣ ಸಚಿವರೊಂದಿಗೆ ಸಭೆ;

ವೃಂದ ಮತ್ತು ನೇಮಕಾತಿ ನಿಯಮಾವಳಿಗಳು ತಿದ್ದುಪಡಿಯಾಗಿರುವುದರಿಂದ ಪ್ರಾಥಮಿಕ ಶಾಲೆ ಶಿಕ್ಷಕರು, ಪದವೀಧರ ಶಿಕ್ಷಕರು ಮತ್ತು ಪ್ರೌಢಶಿಕ್ಷಣ ಶಿಕ್ಷಕರೆಂದು ಬೇರ್ಪಡಿಸಿದ್ದು ಬಡ್ತಿಯಲ್ಲಿ ಸಾಕಷ್ಟು ಅನ್ಯಾಯವಾಗುತ್ತಿದೆ ಎಂದು ಶಿಕ್ಷಕರು ತಮ್ಮ ಅಹವಾಲುಗಳನ್ನು ಸಚಿವರಿಗೆ ನೀಡಿದರು. ಇದಕ್ಕೆ ಸಚಿವರು ಶಿಕ್ಷಕರ ಕುಂದುಕೊರತೆಗಳ ಬಗ್ಗೆ ಸಂಘದ ಪದಾಧಿಕಾರಿಗಳು ಮತ್ತು ಶಿಕ್ಷಣ ಸಚಿವರೊಂದಿಗೆ ಸಭೆಯನ್ನು ಆಯೋಜನೆ ಮಾಡಿಸುವ ಮೂಲಕ ಶಿಕ್ಷಕರ ಕುಂದುಕೊರತೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ,  ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಕೊಟ್ರೇಶ್ ಮಾತನಾಡಿದರು. ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರುಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ಪ್ರಾಥಮಿಕ ಶಾಲಾ ವಿಭಾಗ:

ಚನ್ನಗಿರಿ ತಾಲ್ಲೂಕಿನ ಸತೀಶ್, ಸಹ ಶಿಕ್ಷಕರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ತಿಮ್ಲಾಪುರ, ರತ್ನಮ್ಮ ಸಹ ಶಿಕ್ಷಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೆಟ್ಟಕಡೂರು, ಹರಿಹರ ತಾಲ್ಲೂಕಿನ ಅರುಣ್ ಬಿ, ಸಹ ಶಿಕ್ಷಕರು ಸರ್ಕಾರಿ ಪ್ರಾಥಮಿಕ ಕಿರಿಯ ಪ್ರಾಥಮಿಕ ಶಾಲೆ ಹಿಂಡಸಘಟ್ಟ, ಕೆ.ವಿ ಸುಜಾತ ಮುಖ್ಯ ಶಿಕ್ಷಕರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬುಳ್ಳಾಪುರ, ದಾವಣಗೆರೆ ಉತ್ತರ ವಲಯದ ತಿಪ್ಪೇಶ್ ಟಿ.ಬಿ ಸಹ ಶಿಕ್ಷಕರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬಿ.ಚಿತ್ತಾನಹಳ್ಳಿ, ಗಂಗಮ್ಮ ಸಹ ಶಿಕ್ಷಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಲೇಬೇತೂರು, ದಾವಣಗೆರೆ ದಕ್ಷಿಣ ವಲಯದ ಬಸವರಾಜ ಈ. ಮುಖ್ಯ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿಕ್ಕತೊಗಲೇರಿ, ನಾಗವೇಣಿ ಎ.ಎಲ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶ್ರೀರಾಮಬಡಾವಣೆ, ಜಗಳೂರು ತಾಲ್ಲೂಕಿನ ಪ್ರೇಮ ಡಿ ಸಹ ಶಿಕ್ಷಕಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಚಿಕ್ಕಮ್ಮನಹಟ್ಟಿ, ಶ್ರೀದೇವಿ ಸಹ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಭರಮಸಮುದ್ರ, ಹೊನ್ನಾಳಿ ತಾಲ್ಲೂಕಿನ ಮಹಮ್ಮದ್ ರಫೀ ಬಿ. ಸಹ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತಿಮ್ಮೇನಹಳ್ಳಿ, ಸುಧಾ ಹೆಚ್.ಹೆಚ್ ಸಹ ಶಿಕ್ಷಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸೊರಟೂರು

teachers day; ಹೇಳಿಕೊಟ್ಟ ಪಾಠ ಇಂದಿಗೂ ಮನದಲ್ಲಿ ಅಚ್ಚಾಗಿ ಉಳಿದಿದೆ

ಪ್ರೌಢಶಾಲಾ ವಿಭಾಗ;

ಚನ್ನಗಿರಿ ತಾಲ್ಲೂಕಿನ ಹೆಚ್.ಪಿ ಶಿವಲಿಂಗಪ್ಪ, ದೈಹಿಕ ಶಿಕ್ಷಕರು, ಸರ್ಕಾರಿ ಬಾಲಿಕಾ ಪ್ರೌಢಶಾಲೆ, ನಲ್ಲೂರು, ಹರಿಹರ ತಾಲ್ಲೂಕಿನ ಮಂಜುನಾಥ ಟಿ.ಡಿ, ಸಹ ಶಿಕ್ಷಕರು, ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರೌಢಶಾಲೆ ಶಾಲೆ, ಹರಳಹಳ್ಳಿ, ದಾವಣಗೆರೆ ಉತ್ತರವಲಯದ ನಾಗರಾಜ ಟಿ, ಸಹ ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ಆವರಗೆರೆ, ದಾವಣಗೆರೆ ದಕ್ಷಿಣವಲಯದ ಶ್ರೀಕಾಂತ ಕೆ ಸರ್ಕಾರಿ ಪ್ರೌಢಶಾಲೆ, ಹೆಚ್ ಬಸವಾಪುರ, ಜಗಳೂರು ತಾಲ್ಲೂಕಿನ ಸಿದ್ದಪ್ಪ ಹೆಚ್.ಎಸ್, ಸಹ ಶಿಕ್ಷಕ, ಸರ್ಕಾರಿ ಪ್ರೌಢಶಾಲೆ, ದೇವಿಕೆರೆ, ಹೊನ್ನಾಳಿ ತಾಲ್ಲೂಕಿನ ಮಹೇಂದ್ರನಾಥ್ ಕೆ.ಜಿ, ಸಹ ಶಿಕ್ಷಕರು ಮಾರಿಕಾಂಭ ಪ್ರೌಢಶಾಲೆ, ಉಜ್ಜನೀಪುರ.

ವಿಶೇಷ ಪ್ರಶಸ್ತಿ ಪಡೆದ ಶಿಕ್ಷಕರ ವಿವರ:

ದಾವಣಗೆರೆ ಉತ್ತರ ವಲಯದ ಆರ್ ಅನ್ನಪೂರ್ಣ, ಸರ್ಕಾರಿ ಹಿರಿಯ ಪ್ರೌಢಶಾಲೆ ಎಲೇಬೇತೂರು, ಹಾಲಪ್ಪ ಡಿ, ಸಹ ಶಿಕ್ಷಕ ಸಿ.ವಿ.ವಿ ಕನ್ನಡ ಹಿರಿಯ ಪ್ರೌಢಶಾಲೆ ಶಾಲೆ, ಕೆ.ಪಿ ರಸ್ತೆ, ದಾವಣಗೆರೆ, ಹೊನ್ನಾಳಿ ತಾಲ್ಲೂಕಿನ ಕುಮಾರನಾಯ್ಕ್ ಎಸ್, ಸಹ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಮ್ಮಾರಗಟ್ಟೆ, ನ್ಯಾಮತಿ ತಾಲ್ಲೂಕಿನ ವಿಜಯಲಕ್ಷ್ಮಿ ಬಿ, ಸಹ ಶಿಕ್ಷಕಿ ಸರ್ಕಾರಿ ಕಿರಿಯ ಪ್ರೌಢಶಾಲೆ ಸುರಹೊನ್ನೆ, ರವಿಕುಮಾರ ಹೆಚ್, ಮುಖ್ಯ ಶಿಕ್ಷಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಟಿ ಗೋಪಗೊಂಡನಹಳ್ಳಿ, ಬಸವರಾಜ ಕೆ.ವಿ, ಸಹ ಶಿಕ್ಷಕ, ಸರ್ಕಾರಿ ಪ್ರೌಢಶಾಲೆ, ಜೀನಹಳ್ಳಿ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ವೇಳೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ ಇಟ್ನಾಳ್, ಮಹಾನಗರಪಾಲಿಕೆ ಉಪಮಹಾಪೌರರು ಯಶೋಧ ಹೆಗ್ಗಪ್ಪ, ಮಹಾನಗರಪಾಲಿಕೆ ಸದಸ್ಯೆ ಗೀತಾ ದಿಳ್ಯಪ್ಪ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕಿ ಎಸ್.ಗೀತಾ, ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಪುಪ್ಪಾಲತಾ, ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪಸೀಹ್ ಉದ್ದೀನ್ ಶಾಕೀರ್.ಕೆ.ಎ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!