ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ ಕಾರು ಅಪಘಾತ

ನವದೆಹಲಿ: ಕ್ರಿಕೆಟಿಗ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾಗಿದೆ. ರಿಷಬ್ ಪಂತ್ ಅವರು ಕಾರಿನಲ್ಲಿ ದೆಹಲಿಯಿಂದ ಮನೆಗೆ ಮರಳುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದೆ. ರಿಷಬ್ ಪಂತ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರೂರ್ಕಿಯ ನರ್ಸನ್ ಗಡಿಯಲ್ಲಿರುವ ಮೊಹಮ್ಮದ್‌ಪುರ ಝಾಲ್ ಬಳಿಯ ತಿರುವಿನಲ್ಲಿ ಘಟನೆ ಸಂಭವಿಸಿದೆ. ಸದ್ಯ ಪಂತ್ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗುತ್ತಿದೆ.
ಇನ್ನು ಘಟನೆಯಲ್ಲಿ ಪಂತ್ ಅವರಿಗೆ ಗಾಯಗಳಾಗಿದ್ದು, ಸದ್ಯಕ್ಕೆ ಕ್ಷೇಮವಾಗಿದ್ದಾರೆ ಎಂಬುದು ಸಮಾಧಾನದ ಸುದ್ದಿ. ರಿಷಬ್ ಪಂತ್ ಮನೆಗೆ ಹಿಂದಿರುಗುವಾಗ ಅವರ ಕಾರು ರೇಲಿಂಗ್‌ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಘಟನೆ ನಂತರ ಅವರ ಕಾರಿಗೆ ಬೆಂಕಿ ಹತ್ತಿಕೊಂಡಿದೆ.
ರಿಷಬ್ ಪಂತ್ ಅವರನ್ನು ದೆಹಲಿ ರಸ್ತೆಯಲ್ಲಿರುವ ಸಕ್ಷಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ರಿಷಬ್ ಪಂತ್ ರೂರ್ಕಿಯಿಂದ ಮನೆಗೆ ಮರಳುತ್ತಿದ್ದಾಗ ಅವರ ಕಾರು ನಿಯಂತ್ರಣ ತಪ್ಪಿ ರೇಲಿಂಗ್‌ಗೆ ಡಿಕ್ಕಿ ಹೊಡೆದು ನಂತರ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.
ಕ್ರಿಕೆಟಿಗ ರಿಷಬ್ ಪಂತ್ ಅವರು ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ ಮತ್ತು ಅವರ ಕಾರು ರೂರ್ಕಿಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ ಎಂದು ಉತ್ತರಾಖಂಡದ ಡಿಜಿಪಿ ತಿಳಿಸಿದ್ದಾರೆ. ಬಳಿಕ ಅವರ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಗಾಳಿಯ ಪರದೆಯನ್ನು ಒಡೆದು ಪಂತ್ ಹೊರಬಂದಿದ್ದಾರೆ.ಅಪಘಾತದ ವೇಳೆ ಕಾರಿನಲ್ಲಿ ಒಬ್ಬರೇ ಇದ್ದರು. ದೇಹದಲ್ಲಿ ಹೆಚ್ಚಿನ ಗಾಯವಾಗಿಲ್ಲ ಆದರೆ ಒಂದು ಕಾಲಿಗೆ ಮೂಳೆ ಮುರಿತವಾಗುವ ಸಾಧ್ಯತೆ ಇದೆ ಎಂದು ಡಿಜಿಪಿ ತಿಳಿಸಿದ್ದಾರೆ. ಅವರನ್ನು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ ಕರೆತರಲಾಗುತ್ತಿದೆ ಎಂದು ತಿಳಿಸಿದ್ದಾರೆ.

 
                         
                       
                       
                       
                       
                       
                      