ಅಪರಾಧದಾವಣಗೆರೆದೇಶರಾಜ್ಯ / ಕರ್ನಾಟಕವಿದೇಶ

Terrorist: ದಾವಣಗೆರೆಯಲ್ಲಿ ಮತ್ತೊಬ್ಬ ಶಂಕಿತ ಉಗ್ರನ ಬಂಧನ: ಪಾಕ್ ಮೂಲದ ಉಗ್ರ ಸಂಘಟನೆಗೆ ನೇರ ಸಂಪರ್ಕವಿದ್ದ ಉತ್ತರ ಪ್ರದೇಶದ ಸುಹೇಲ್ ಪೋಲೀಸ್ ವಶಕ್ಕೆ

Share
Share

ದಾವಣಗೆರೆ: (Suspected Terrorist) ದಾವಣಗೆರೆ ಜಿಲ್ಲಾ ಪೊಲೀಸ್ ಮತ್ತು ಕೇಂದ್ರ ಗುಪ್ತಚರ ಇಲಾಖೆಯ (ಐಬಿ) ಅಧಿಕಾರಿಗಳು ಜಂಟಿಯಾಗಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯೊಂದಿಗೆ ನೇರ ಸಂಪರ್ಕ ಹೊಂದಿದ್ದ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರನೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಪೇಂಟಿಂಗ್ ಕೆಲಸ ಮಾಡುವ ನೆಪದಲ್ಲಿ ಅಡಗಿ ಕುಳಿತಿದ್ದ ಉತ್ತರ ಪ್ರದೇಶ ಮೂಲದ ಸುಹೇಲ್ ಎಂಬಾತನೇ ಬಂಧಿತ ಶಂಕಿತ ಭಯೋತ್ಪಾದಕ.

*ಬಂಧನದ ಹಿನ್ನೆಲೆ:*
ಇತ್ತೀಚೆಗಷ್ಟೇ ರಾಜ್ಯದ ತುಮಕೂರು ಹಾಗೂ ದಾವಣಗೆರೆ ನಗರದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಪೊಲೀಸರು ಬಂಧಿಸಿದ್ದರು. ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಲಭ್ಯವಾದ ಮಹತ್ವದ ಸುಳಿವು ಮತ್ತು ಮಾಹಿತಿಯ ಆಧಾರದ ಮೇಲೆ ಸದ್ಯ ಈ ಮೂರನೇ ಶಂಕಿತ ಉಗ್ರ ಸುಹೇಲ್‌ನನ್ನು ಬನ್ನಿಕೋಡು ಗ್ರಾಮದಲ್ಲಿ ಸೆರೆಹಿಡಿಯಲಾಗಿದೆ. ಕಾರ್ಮಿಕನ ಸೋಗಿನಲ್ಲಿ ಹಳ್ಳಿಯೊಂದರಲ್ಲಿ ವಾಸವಿದ್ದ ಈತ, ಪಾಕಿಸ್ತಾನದ ಉಗ್ರಗಾಮಿ ಸಂಘಟನೆಗಳೊಂದಿಗೆ ನಿರಂತರವಾಗಿ ನೇರ ಸಂಪರ್ಕದಲ್ಲಿದ್ದ ಎನ್ನಲಾಗಿದೆ.

*ಜಂಟಿ ಕಾರ್ಯಾಚರಣೆ:*
ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಶೇಖರ್ ಹೆಚ್.ಟಿ. ಅವರ ನೇರ ಮಾರ್ಗದರ್ಶನದಲ್ಲಿ, ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಡಿವೈಎಸ್ಪಿ ಬಸವರಾಜ್, ಕೇಂದ್ರೀಯ ಗುಪ್ತಚರ ವಿಭಾಗದ ಸಿಬ್ಬಂದಿ ಹಾಗೂ ದಾವಣಗೆರೆ ಅಪರಾಧ ವಿಭಾಗದ ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತಂಡ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ.

ಬಂಧನದ ಬಳಿಕ ಮುಂದಿನ ತನಿಖೆಗಾಗಿ ಶಂಕಿತ ಉಗ್ರ ಸುಹೇಲ್‌ನನ್ನು ದಾವಣಗೆರೆ, ತುಮಕೂರು ಮತ್ತು ಕೇಂದ್ರ ಗುಪ್ತಚರ ವಿಭಾಗದ ಪೊಲೀಸರು ಬಿಗಿ ಭದ್ರತೆಯೊಂದಿಗೆ ದಾವಣಗೆರೆಯಿಂದ ತುಮಕೂರು ಜಿಲ್ಲೆಗೆ ಕರೆದೊಯ್ದಿದ್ದಾರೆ. ತನಿಖೆಯ ನಂತರ ಈ ಜಾಲದ ಕುರಿತು ಇನ್ನಷ್ಟು ಆತಂಕಕಾರಿ ವಿಷಯಗಳು ಹೊರಬರುವ ಸಾಧ್ಯತೆಯಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ದಾವಣಗೆರೆ

Agriculture: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ರೈತರಿಗೆ ಕೃಷಿ ಉಪಕರಣ ವಿತರಣೆ

ದಾವಣಗೆರೆ: (Agriculture ) ಕರ್ನಾಟಕ ರಾಜ್ಯ ಮನರೇಗಾ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ ಹಾಗೂ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ನಿಯಮಿತ ಪ್ರಾದೇಶಿಕ ಕಚೇರಿ ವತಿಯಿಂದ ಇಲ್ಲಿನ ನಗರದ ರೋಟರಿ...

ದಾವಣಗೆರೆರಾಜ್ಯ / ಕರ್ನಾಟಕ

Transfer:ದಾವಣಗೆರೆಯ ದಕ್ಷ ಅಧಿಕಾರಿ ಗಾಯತ್ರಿ ವರ್ಗಾವಣೆ: ಈ ಹಿಂದೆ ಕಾಂಗ್ರೆಸ್ ಮುಖಂಡನ ಪುತ್ರರ ಬಂಧಿಸಿ ಸುದ್ದಿಯಾಗಿದ್ದ ಇನ್ಸ್‌ಪೆಕ್ಟರ್

ದಾವಣಗೆರೆ: (Transfer) ಕರ್ನಾಟಕ ಪೊಲೀಸ್ ಇಲಾಖೆಯ ಇತ್ತೀಚಿನ ವರ್ಗಾವಣೆ ಆದೇಶದನ್ವಯ, ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಗಾಯತ್ರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಇವರನ್ನು ಬಳ್ಳಾರಿ ಜಿಲ್ಲೆಯ...

Related Articles
ದಾವಣಗೆರೆ

Gandhi Jayanthi: ಗಾಂಧೀಜಿಯವರ ತತ್ವ-ಆದರ್ಶಗಳು ಇಂದಿನ ಸಮಾಜಕ್ಕೆ ದಾರಿದೀಪ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ  

ದಾವಣಗೆರೆ:(Gandhi Jayanthi) ನಮ್ಮ ಭಾಷೆ ಮತ್ತು ತಾಯಿನಾಡು ನಮಗೆ ಎಷ್ಟು ಮುಖ್ಯವೋ, ಗಾಂಧೀಜಿಯವರು ಕೂಡ ಭಾರತದ...

ಜಿಲ್ಲೆಗಳುರಾಜ್ಯ / ಕರ್ನಾಟಕ

SP: ಚಿತ್ರದುರ್ಗದ ನೂತನ ಎಸ್ಪಿಯಾಗಿ ಕುಶಾಲ್ ಚೌಕ್ಸೆ ನೇಮಕ

ಬೆಂಗಳೂರು:(SP) ಕರ್ನಾಟಕ ಸರ್ಕಾರವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ್ದು, ಬೆಂಗಳೂರಿನ ಆಡಳಿತ ವಿಭಾಗದ ಡಿಸಿಪಿಯಾಗಿದ್ದ (DCP...

ಅಪರಾಧದಾವಣಗೆರೆ

Robbery: ದಾವಣಗೆರೆಯಲ್ಲಿ ವ್ಯಾಪಾರಿ ಅಪಹರಿಸಿ 10 ಲಕ್ಷಕ್ಕೆ ಬೇಡಿಕೆ: ಕೃತ್ಯ ಎಸಗಿ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು

ದಾವಣಗೆರೆ: (Robbery)  ದಾವಣಗೆರೆಯಲ್ಲಿ ಬಟ್ಟೆ ವ್ಯಾಪಾರಿಯೊಬ್ಬರನ್ನು ಹಣಕಾಸಿನ ಮಾತುಕತೆ ನೆಪದಲ್ಲಿ ಕರೆದೊಯ್ದು, ಕೊಠಡಿಯೊಂದರಲ್ಲಿ ಬಂಧಿಸಿ 10...

ದಾವಣಗೆರೆರಾಜ್ಯ / ಕರ್ನಾಟಕ

IGP: ದಾವಣಗೆರೆ ಪೂರ್ವ ವಲಯ ಐಜಿಪಿಯಾಗಿ ಎನ್. ಸತೀಶ್ ಕುಮಾರ್ ವರ್ಗಾವಣೆ

ದಾವಣಗೆರೆ: (IGP) ಕರ್ನಾಟಕ ಸರ್ಕಾರವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಂಡಿದ್ದು, ಹಿರಿಯ ಐಪಿಎಸ್ ಅಧಿಕಾರಿ...