tet exam; ಸೆ. 3ರಂದು ಟಿಇಟಿ ಪರೀಕ್ಷೆ

ಎಸ್ಸೆಸ್ಸೆಲ್ಸಿ: ರಾಜ್ಯಾದ್ಯಂತ 3,305 ಕೇಂದ್ರಗಳಲ್ಲಿ ಪರೀಕ್ಷೆ

ದಾವಣಗೆರೆ, ಸೆ.01: ಪ್ರಸಕ್ತ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (tet exam) ಸೆಪ್ಟಂಬರ್ 3 ರಂದು ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ.

ಮೊದಲ ಅಧೀವೇಶನ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ 2ನೇ ಅಧೀವೇಶನ ಅಪರಾಹ್ನ 2.30 ರಿಂದ 4 ಗಂಟೆಯವರೆಗೆ ನಡೆಯುತ್ತದೆ. ಒಟ್ಟು 7086 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೊಟ್ರೇಶ್ ತಿಳಿಸಿದ್ದಾರೆ.

**

ಕುರಿ ಮತ್ತು ಮೇಕೆ, ಕೋಳಿ ಸಾಕಾಣಿಕೆ ತರಬೇತಿ

ದಾವಣಗೆರೆ, ಸೆ.01: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ  ಸೆಪ್ಟೆಂಬರ್ 5 ಮತ್ತು 6 ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಹಾಗೂ 7 ಮತ್ತು 8 ರಂದು ಕೋಳಿ ಸಾಕಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ.

ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ತರಬೇಕು. ತರಬೇತಿಯಲ್ಲಿ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು  ಪಶುವೈದ್ಯಕೀಯ  ತರಬೇತಿ ಕೇಂದ್ರ ದಾವಣಗೆರೆ ದೂ. 08192-233787 ಗೆ ಸಂಪರ್ಕಿಸಬಹುದೆಂದು ಮುಖ್ಯ ಪಶು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!