ತಂಬಾಕು ಮಾರಾಟ ಅಂಗಡಿಗಳಿಗೆ ದಾಳಿ: 55 ಪ್ರಕರಣ ದಾಖಲು

 

ಚಿತ್ರದುರ್ಗ.ಜೂ.30:
ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಕೋಟ್ಪಾ-2003ರ ಕಾಯ್ದೆಯ ಕುರಿತು ಜಿಲ್ಲಾ ಮಟ್ಟದ ತಂಬಾಕು ತನಿಖಾ ತಂಡ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಪಟ್ಟಣ ಪ್ರದೇಶದಲ್ಲಿ ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ಮಂಗಳವಾರ ದಾಳಿ ನಡೆಸಿ ಒಟ್ಟು 55 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಿದೆ.

ತಂಬಾಕು ಮತ್ತು ಕೊರೋನಾ ಕುರಿತು ಸಾರ್ವಜನಿಕರಲ್ಲಿ ಮತ್ತು ಅಂಗಡಿ ಮಾಲೀಕರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ತಡೆಗಟ್ಟಲು ಜಾಗೃತಿ ಮೂಡಿಸಲಾಯಿತು.
ಕೋಟ್ಪಾ-2003ರ ಕಾಯ್ದೆಯ ಕುರಿತು ಜಾಗೃತಿ ನೀಡಿ, ಸಂಬಂಧಪಟ್ಟ ಸೆಕ್ಷನ್-4, 6ಎ ಮತ್ತು 6ಬಿ ಬೋರ್ಡ್‍ಗಳನ್ನು ಹಾಕಲು ಸೂಚಿಸಲಾಯಿತು ಮತ್ತು ಸೆಕ್ಷನ್-4 ಅಡಿಯಲ್ಲಿ 43 ಕೇಸುಗಳನ್ನು ದಾಖಲಿಸಿ ರೂ. 4150 ದಂಡವನ್ನು ಮತ್ತು ಸೆಕ್ಷನ್-6ಎ ಅಡಿಯಲ್ಲಿ 12 ಕೇಸುಗಳನ್ನು ದಾಖಲಿಸಿ ರೂ. 950 ದಂಡವನ್ನು ವಸೂಲಿ ಮಾಡಲಾಯಿತು.

ನಾಲ್ಕು  ತಂಬಾಕು ಜಾಹೀರಾತು ಬೋರ್ಡ್‍ಗಳನ್ನು ತೆರವುಗೊಳಿಸಲಾಯಿತು. ಸೆಕ್ಷನ್-4 2 ಬೋರ್ಡ್‍ಗಳನ್ನು, ಸೆಕ್ಷನ್-6ಎ 1 ಬೋರ್ಡ್‍ಗಳನ್ನು ಹಾಕಿಸಲಾಯಿತು.
ತಂಬಾಕು ದಾಳಿಯಲ್ಲಿ ಜಿಲ್ಲಾ ಮಟ್ಟದ ತನಿಖಾ ತಂಡದ ಅಧಿಕಾರಿಗಳಾದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ್, ಸಮಾಜ ಕಾರ್ಯಕರ್ತ ಕೆ.ಎಂ.ತಿಪ್ಪೇಸ್ವಾಮಿ, ರಾಂಪುರ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ವಿಶ್ವಾಸ್, ಆರೋಗ್ಯ ನಿರೀಕ್ಷಕ ಕಾಂತರಜ, ಪೊಲೀಸ್ ಇಲಾಖೆಯ ಧರನೇಶಪ್ಪ, ಪ್ರೇಮಕುಮಾರ್ ಇದ್ದರು.

Leave a Reply

Your email address will not be published. Required fields are marked *

error: Content is protected !!