ಬಿಜೆಪಿಯಲ್ಲಿ ಬಣಗಳ ವಾಗ್ವಾದ ಅರ್ಧಕ್ಕೆ ಮೊಟಕುಗೊಂಡ ಚನ್ನಗಿರಿ ವಿಜಯ ಸಂಕಲ್ಪ ಯಾತ್ರೆ

ಬಿಜೆಪಿಯಲ್ಲಿ ಬಣಗಳ ವಾಗ್ವಾದ ಅರ್ಧಕ್ಕೆ ಮೊಟಕುಗೊಂಡ ಚನ್ನಗಿರಿ ವಿಜಯ ಸಂಕಲ್ಪ ಯಾತ್ರೆ

ದಾವಣಗೆರೆ: ಚನ್ನಗಿರಿ ಪಟ್ಟಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ವಿಜಯ ಸಂಕಲ್ಪ ಯಾತ್ರೆ ಬಿಜೆಪಿಯ ಎರಡು ಬಣಗಳ ಜಗಳದಿಂದ ಅರ್ಧಕ್ಕೆ ಮೊಟಕುಗೊಂಡಿದೆ.
ಬಿಜೆಪಿ ಟಿಕೆಟ್‌ ಪ್ರಬಲ ಆಕಾಂಕ್ಷಿಯಾಗಿರುವ ಹೆಚ್.ಎಸ್. ಶಿವಕುಮಾರ್ ಹಾಗೂ ಹಾಲಿ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅವರ ಪುತ್ರ ಮಾಡಾಳ್‌ ಮಲ್ಲಿಕಾರ್ಜುನ ಬೆಂಬಲಿಗರ ನಡುವೆ ತೀವ್ರ ವಾಗ್ವಾದ ಉಂಟಾಗಿರುವ ಹಿನ್ನೆಲೆಯಲ್ಲಿ ವಿಜಯ ಸಂಕಲ್ಪ ಯಾತ್ರೆಯನ್ನೇ ನಿಲ್ಲಿಸಲಾಯಿತು.

ಬಿಜೆಪಿಯಲ್ಲಿ ಬಣಗಳ ವಾಗ್ವಾದ ಅರ್ಧಕ್ಕೆ ಮೊಟಕುಗೊಂಡ ಚನ್ನಗಿರಿ ವಿಜಯ ಸಂಕಲ್ಪ ಯಾತ್ರೆ
ಚನ್ನಗಿರಿಯಲ್ಲಿ ಅದ್ಧೂರಿಯಾಗಿ ಆಯೋಜನೆಗೊಂಡಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌ ಹಾಗೂ ಶಾಸಕ ರೇಣುಕಾಚಾರ್ಯ ಅವರಿದ್ದ ಯಾತ್ರೆಯ ವಾಹನವೂ ಅದ್ಧೂರಿ ಮೆರವಣಿಗೆಯಲ್ಲಿ ಸಾಗುತ್ತಿತ್ತು. ಆದರೆ, ಯಾತ್ರೆಯು ಚನ್ನಗಿರಿ ಪಟ್ಟಣ ಬಸ್ ಸ್ಟ್ಯಾಂಡ್ ಮುಂಭಾಗ ಆಗಮಿಸುತ್ತಿದ್ದಂತೆ ಎಣ್ಣೆ ಸೀಗೆಕಾಯಿಯಂತಿದ್ದ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಬಣ ಹಾಗೂ ಚನ್ನಗಿರಿಯಲ್ಲಿ ಬಿಜೆಪಿ ಟಿಕೆಟ್‌ ಹೊಸ ಆಕಾಂಕ್ಷಿ ಹೆಚ್.ಎಸ್. ಶಿವಕುಮಾರ್ ಬಣದ ನಡುವೆ ವಾಗ್ವಾದ ಶುರುವಾಯಿತು.

ಬಿಜೆಪಿಯಲ್ಲಿ ಬಣಗಳ ವಾಗ್ವಾದ ಅರ್ಧಕ್ಕೆ ಮೊಟಕುಗೊಂಡ ಚನ್ನಗಿರಿ ವಿಜಯ ಸಂಕಲ್ಪ ಯಾತ್ರೆ
ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಹಾಗೂ ಮಾಡಾಳ್‌ ವಿರುಪಾಕ್ಷಪ್ಪ ಹೊರತಾದ ಮತ್ತೊಬ್ಬ ನಾಯಕ ಎಂದೇ ಬಿಂಬಿತ ಆಗಿರುವ ಎಚ್.ಎಸ್. ಶಿವಕುಮಾರ್ ಅವರು ವಿಜಯ ಸಂಕಲ್ಪ ಯಾತ್ರೆ ವಾಹನಕ್ಕೆ ಹತ್ತಲು ಹೋಗಿದ್ದಾರೆ. ಆದರೆ, ಈ ವೇಳೆ ಮಾಡಾಳ್‌ ಪುತ್ರ ಮಲ್ಲಿಕಾರ್ಜುನ ಹಾಗೂ ಅವರ ಬೆಂಬಲಿಗರು ಯಾತ್ರೆಯ ವಾಹನಕ್ಕೆ ಹತ್ತಿಸಿಕೊಳ್ಳಲಿಲ್ಲ. ಆದ್ದರಿಂದ ಎರಡೂ ಬಣದ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು, ವಾಹನದಲ್ಲಿದ್ದ ನಾಯಕರಿಗೂ ತರಾಟೆ ತೆಗೆದುಕೊಂಡಿದ್ದಾರೆ.
ಏತನ್ಮಧ್ಯೆ ಸಂಸದ ಜಿ.ಎಂ. ಸಿದ್ದೇಶ್ವರ ಹಾಗೂ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರಿಗೆ ಮಾಡಾಳು ಬೆಂಬಲಿಗರು ಘೇರಾವ್ ಹಾಕಿದರು. ಚನ್ನಗಿರಿ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ ಮಾಡುವಂತೆ ಒತ್ತಾಯಿಸಿದರು. ಬೆಂಬಲಿಗರ ಈ ವರ್ತನೆಗೆ ಸಿದ್ದೇಶ್ವರ್ ಹಾಗೂ ರವಿಕುಮಾರ್ ಮುಜುಗರಕ್ಕೊಳಪಡಬೇಕಾಯಿತು.
ಸಿದ್ದೇಶ್ವರ ಕಾರಿಗೆ ಮಾಡಾಳು ವಿರೂಪಾಕ್ಷಪ್ಪ ಬೆಂಬಲಿಗರು ಮುತ್ತಿಗೆ ಹಾಕಿ ಸಿದ್ದೇಶ್ವರ್ ವಿರುದ್ಧ ಘೋಷಣೆ ಕೂಗಿದರು.

ಬಿಜೆಪಿಯಲ್ಲಿ ಬಣಗಳ ವಾಗ್ವಾದ ಅರ್ಧಕ್ಕೆ ಮೊಟಕುಗೊಂಡ ಚನ್ನಗಿರಿ ವಿಜಯ ಸಂಕಲ್ಪ ಯಾತ್ರೆ
ಲೋಕಸಭಾ ಸಂಸದ ಜಿ.ಎಂ. ಸಿದ್ದೇಶ್ವರ, ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌ ಅವರ ಮಾತನ್ನು ಯಾವೊಬ್ಬ ಕಾರ್ಯಕರ್ತರೂ ಆಲಿಸಲು ಸಿದ್ಧರಿರಲಿಲ್ಲ. ಇನ್ನು ನೆರೆಹೊರೆ ಕ್ಷೇತ್ರವಾದ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಕಾರ್ಯಕರ್ತರನ್ನು ಸಮಾಧಾನ ಮಾಡಲು ಮುಂದಾದರೂ ಅವರನ್ನೇ ನೂಕಾಟ- ತಳ್ಳಾಟದ ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ವಿಜಯಸಂಕಲ್ಪ ಯಾತ್ರೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ತಮ್ಮ ಕಾರುಗಳನ್ನು ಹತ್ತಿ ಮನೆಯತ್ತ ಸಾಗಿದರು.

Leave a Reply

Your email address will not be published. Required fields are marked *

error: Content is protected !!