Bike: ಬೆಳ್ಳಂ ಬೆಳಗ್ಗೆ ರಸ್ತೆಗಿಳಿದ ಜಿಲ್ಲಾಧಿಕಾರಿ, ನಂಬರ್ ಪ್ಲೇಟ್ ಇಲ್ಲದ ವಾಹನಗಳು ವಶಕ್ಕೆ, ಮಾಲಿಕರಿಗೆ ಕೋರ್ಟ್ ಮೂಲಕ ನೋಟಿಸ್ ನೀಡಲು ಸೂಚನೆ

WhatsApp Image 2025-07-08 at 11.04.39 AM
ದಾವಣಗೆರೆ (Bike seize) :  ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರು ಸಂಚಾರ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಸೇರಿದಂತೆ ಅಪಘಾತ ಪ್ರಮಾಣವನ್ನು ಗಣನೀಯವಾಗಿ ತಗ್ಗಿಸಲು ಸತತ ಪ್ರಯತ್ನ ಮಾಡುತ್ತಿದ್ದು ಜುಲೈ 8 ರಂದು ಮಂಗಳವಾರÀ ಬೆಳ್ಳಂಬೆಳಗ್ಗೆ ರಸ್ತೆಗಿಳಿದು 30ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು ಸಂಚಾರಿ ದಕ್ಷಿಣ ವಲಯ ಠಾಣೆಗೆ ಹಸ್ತಾಂತರಿಸಿದರು.

ಕೆಲವು ಕಾಲೇಜಿನ ವಿದ್ಯಾರ್ಥಿಗಳು ದ್ವಿಚಕ್ರವಾಹನಕ್ಕೆ ನಂಬರ್ ಪ್ಲೇಟ್ ಇಲ್ಲದೇ ವಾಹನ ಚಲಾಯಿಸುತ್ತಿರುವುದು ಮತ್ತು ವಯಸ್ಕರು ಕೂಡ ವಾಹನದ ನಂಬರ್ ಪ್ಲೇಟ್ ಇಲ್ಲದೇ ವಾಹನ ಚಲಾಯಿಸುತ್ತಿರುವುದನ್ನು ಪತ್ತೆಹಚ್ಚಿ, ಅಂತಹ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.


ವಾಹನದ ನಂಬರ್ ಪ್ಲೇಟ್ ಇಲ್ಲದೇ ಚಲಾಯಿಸುವುದು ಮೋಟಾರ್ ವಾಹನ ಕಾಯಿದೆಯ ಸೆಕ್ಷನ್ 177 ರ ಉಲ್ಲಂಘನೆಯಾಗಿದ್ದು ದಂಡನೆಗೆ ಅವಕಾಶ ನೀಡಲಾಗಿದೆ. ವಾಹನಗಳಿಗೆ ಕಾನೂನು ಬದ್ದತೆ, ಗುರುತು ಮತ್ತು ಭದ್ರತೆಗೆ ಸಂಬಂಧಿಸಿದಾಗಿದ್ದು ಪ್ರತಿಯೊಂದು ವಾಹನದ ಗುರುತಿಗಾಗಿ ಮತ್ತು ಅಪರಾಧಗಳಲ್ಲಿ ಬಳಸುವ ವಾಹನ ಗುರುತಿಗಾಗಿ ಮತ್ತು ಸಂಚಾರಿ ನಿಯಮಗಳ ಉಲ್ಲಂಘನೆ ಪತ್ತೆ, ಕಳ್ಳತನ ಪತ್ತೆಹಚ್ಚಲು ಪ್ರತಿ ವಾಹನದ ನಂಬರ್ ಪ್ಲೇಟ್ ಸಹಾಯಕವಾಗಿದ್ದು ಪ್ರತಿ ವಾಹನಗಳಲ್ಲಿ ನಂಬರ್ ಪ್ಲೇಟ್ ಅಳವಡಿಕೆ ಕಾನೂನುಬದ್ದವಾಗಿದೆ. ಆದರೆ ನಂಬರ್ ಪ್ಲೇಟ್ ಇಲ್ಲದೇ ವಾಹನಗಳನ್ನು ಬಳಸುತಿದ್ದು ಈ ವಾಹನಗಳ ಮಾಲಿಕರಿಗೆ ನ್ಯಾಯಾಲಯದ ಮೂಲಕ ನೋಟಿಸ್ ನೀಡಲು ಸೂಚನೆ ನೀಡಿದರು.
ಬೆಳಗ್ಗೆ 6 ರಿಂದ ಮಧ್ಯಾಹ್ನದ 12 ಗಂಟೆಯವರೆಗೆ ಡೆಂಟಲ್ ಕಾಲೇಜು ರಸ್ತೆ, ಬಾಯ್ಸ್ ಹಾಸ್ಟೆಲ್, ಕ್ರೀಡಾ ನಿಲಯ, ಎಂಸಿಸಿ `ಬಿ` ಬ್ಲಾಕ್, ಶಾಮನೂರು ವರ್ತುಲ ರಸ್ತೆಯಲ್ಲಿ ಮಿಂಚಿನ ಸಂಚಾರ ಕೈಗೊಳ್ಳಲಾಯಿತು.

ಇತ್ತೀಚಿನ ಸುದ್ದಿಗಳು

error: Content is protected !!