ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ಹೇರಿದೆ ಸರ್ಕಾರ

ಬೆಂಗಳೂರು: ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ರಾಜ್ಯ ಸರ್ಕಾರ ಕಾಂಗ್ರೆಸ್ ನಡೆಸುತ್ತಿದ್ದ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ಹೇರಿದೆ. ಪಾದಯಾತ್ರೆಯನ್ನು ತಕ್ಷಣ ನಿಲ್ಲಿಸುವಂತೆ ಆದೇಶ ಹೊರಡಿಸಲಾಗಿದೆ. ಒಂದು ವೇಳೆ ಸರ್ಕಾರದ ಆದೇಶವನ್ನು ಉಲ್ಲಂಘಿಸಿದರೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ. ಕಾಂಗ್ರೆಸ್ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆಯನ್ನು ನಿಲ್ಲಿಸಬೇಕು ಎಂದು ರಾಮನಗರ ಎಸ್‌ಪಿ, ಡಿಸಿಗೆ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸೂಚನೆ ನೀಡಿದ್ದಾರೆ.
ಪಾದಯಾತ್ರೆಯ ವಾಹನ, ಜನರ ಸಂಚಾರ ನಿಷೇಧಕ್ಕೆ ಆದೇಶ ಹೊರಡಿಸಲಾಗಿದೆ. ರಾಮನಗರ ಜಿಲ್ಲಾಧಿಕಾರಿ, ಎಸ್ ಪಿ ಮೂಲಕ ಪಾದಯಾತ್ರೆಗೆ ಬ್ರೇಕ್ ಹಾಕಲು ತೀರ್ಮಾನಿಸಲಾಗಿದೆ. ಸರ್ಕಾರದ ಆದೇಶ ಉಲ್ಲಂಘಿಸಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ. ಹೈಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಬೇಕಿರುವ ಹಿನ್ನೆಲೆ, ಮತ್ತೊಂದು ಸೂಚನೆ ನೀಡುವ ಸಲುವಾಗಿ ನಿಷೇಧ ಹೇರಲಾಗಿದೆ.