ಗುರುವಾರ ಕರ್ನಾಟಕ ಬಂದ್‌ಗೆ ಕರೆ ನೀಡಿದೆ ಮುಸ್ಲಿಂ ಸಂಘಟನೆ, ಇದು ನಿಜಾನಾ?

ಬೆಂಗಳೂರು : ಮುಸ್ಲಿಂ ಸಂಘಟನೆ ಮುಖಂಡರು ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿಗೆ ವಿರೋಧ ವ್ಯಕ್ತಪಡಿಸಿದ್ದು ಗುರುವಾರ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ಶಾಲಾ- ಕಾಲೇಜಿನಲ್ಲಿ ಹಿಜಾಬ್ ಧರಿಸುವಂತಿಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಎಂದು ಮಂಗಳವಾರ ಕರ್ನಾಟಕ ಹೈಕೋರ್ಟ್ ಅಂತಿಮ ತೀರ್ಪು ನೀಡಿದ್ದು, ಕೋರ್ಟ್ ತೀರ್ಪಿಗೆ ಮುಸ್ಲಿಂ ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ನಾಳೆ (ಗುರುವಾರ) ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ಮುಸ್ಲಿಂ ಮುಖಂಡರು ಸ್ವಯಂ ಪ್ರೇರಿತ ಬಂದ್‌ಗೆ ಘೋಷಣೆ ಮಾಡಿದ್ದಾರೆ. ನಾಳೆ (ಮಾರ್ಚ್- 17) ಇಡೀ ರಾಜ್ಯಾದ್ಯಂತ ಮುಸ್ಲಿಂ ಸಮುದಾಯ ವ್ಯಾಪಾರ, ವಹಿವಾಟು ಬಂದ್ ಮಾಡಲು ಸೂಚನೆ ನೀಡಿದ್ದಾರೆ. ಈ ದಿನ ಮುಸ್ಲಿಂ ಸಮುದಾಯದವರು ನಡೆಸುತ್ತಿರುವ ವ್ಯಾಪಾರ ವಹಿವಾಟು ನಡೆಸದೆ ಬಂದ್ ಮಾಡಲು ಧರ್ಮಗುರುಗಳ ಸಭೆಯಲ್ಲಿ ಮುಸ್ಲಿಂ ಮುಖಂಡ ಸಗೀರ್ ಅಹ್ಮದ್ ಘೋಷಣೆ ಮಾಡಿದ್ದಾರೆ. ಯಾರ ಮೇಲೂ ಒತ್ತಾಯ ಹೇರಿ ಬಂದ್ ನಡೆಸದಿರುವಂತೆ ಒತ್ತಾಯಿಸಿದ್ದಾರೆ.

ಅಲ್ಪಸಂಖ್ಯಾತ ಸಮುದಾಯದ ರಾಜಕೀಯ ನಾಯಕರು ಹಿಜಾಬ್ ವಿಚಾರವಾಗಿ ಹೈಕೋರ್ಟ್ ತೀರ್ಪಿನ ನಂತರ ಸಭೆ ನಡೆಸಿದ್ದರು. ಅಮಿರ್ ಎ ಷರಿಯಾತ್ ಅವರ ನಿವಾಸದಲ್ಲಿ ಸಭೆ ನಡೆದಿತ್ತು. ಸಭೆಯಲ್ಲಿ ಎಂಎಲ್‌ಸಿ ಸಲೀಂ ಅಹ್ಮದ್, ಜಮೀರ್ ಅಹ್ಮದ್ ಖಾನ್, ಯು.ಟಿ. ಖಾದರ್, ಎನ್.ಎ. ಹ್ಯಾರಿಸ್, ನಜೀರ್ ಅಹ್ಮದ್, ರೆಹಮಾನ್ ಖಾನ್, ಖನೀಜ್ ಫಾತಿಮಾ ಸೇರಿದಂತೆ ಇತರರು ಭಾಗಿಯಾಗಿದ್ದರು. ಹೈಕೋರ್ಟ್ ತೀರ್ಪಿನ ಬಳಿಕ ವಿದ್ಯಾರ್ಥಿನಿಯರು ನೀಡಿದ್ದ ಹೇಳಿಕೆಗೆ ಧರ್ಮಗುರುಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅವರ ವರ್ತನೆ ಸರಿ ಅಲ್ಲ, ಅವರಿಗೆ ಮಾರ್ಗದರ್ಶನ ಅಗತ್ಯವಿದೆ. ಸುದ್ದಿಗೋಷ್ಠಿಗೆ ಉತ್ತೇಜಿಸಿದ್ದು ಸರಿ ಅಲ್ಲ ಎಂದಿದ್ದಾರೆ. ಹೈಕೋರ್ಟ್ ತೀರ್ಪಿನಿಂದ ಆತಂಕ ಪಡುವ ಅಗತ್ಯವಿಲ್ಲ. ಸಮವಸ್ತ್ರ ಇರುವಲ್ಲಷ್ಟೇ ಆದೇಶ ಪಾಲನೆ ಮಾಡಲು ಹೇಳಿದೆ. ಸುಪ್ರೀಂಕೋರ್ಟ್ಗೆ  ಹೋಗಲು ಸಹ ನಮಗೆ ಅವಕಾಶ ಇದೆ. ಈಗಾಗಲೇ ಕಪಿಲ್ ಸಿಬಲ್ ಜೊತೆ ಮಾತನಾಡಲಾಗಿದೆ. ಅನಗತ್ಯವಾಗಿ ಸಮಾಜದಲ್ಲಿ ಗೊಂದಲ ಸೃಷ್ಟಿಯಾಗುವುದು ಬೇಡ ಎಂದು ಎಲ್ಲ ನಾಯಕರಿಗೆ ನಿನ್ನೆ ಅಮಿರ್ ಎ ಷರಿಯಾತ್ ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!