ಸಂಜೆಯೊಳಗೆ 170ರಿಂದ 180 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ಬೆಂಗಳೂರು :ಇಂದು ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. 170 ರಿಂದ 180 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಪಟ್ಟಿ ಬಿಡುಗಡೆಗೂ ಮುನ್ನ ಮತ್ತೊಂದು ಸುತ್ತಿನ ಸಭೆ ನಡೆಸುತ್ತೇವೆ ಎಂದು ತಿಳಿಸಿದರು.
ಕೆಲವು ಹಾಲಿ ಶಾಸಕರಿಗೆ ಈ ಬಾರಿ ಟಿಕೆಟ್ ಕೈತಪ್ಪಲಿದೆ. ಅಂತಿಮ ಸುತ್ತಿನ ಸಭೆ ಬಳಿಕ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಬಿಎಸ್ ವೈ ತಿಳಿಸಿದರು.