ಡಬಲ್ ಎಂಜಿನ್, ಡಬಲ್ ವೇಗದ ಅಭಿವೃದ್ಧಿ ಬಗ್ಗೆ ರಾಜ್ಯದ ಜನತೆಗೆ ನಂಬಿಕೆ ಇದೆ: ಅರುಣ್ ಸಿಂಗ್

ಚಿಕ್ಕಬಳ್ಳಾಪುರ: ರಾಜ್ಯದ ಜನತೆಗೆ ಡಬಲ್ ಎಂಜಿನ್ ಸರ್ಕಾರದ ಅಗತ್ಯತೆ ಮತ್ತು ಅಭಿವೃದ್ಧಿ ಕೆಲಸಗಳ ವೇಗದ ಬಗ್ಗೆ ನಂಬಿಕೆ ಇದೆ. ಪ್ರಧಾನಿ ನರೇಂದ್ರ ಮೋದಿ ನಾಯತಕತ್ವ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ವಿಜಯ ಸಂಕಲ್ಪ ಅಭಿಯಾನದ ವೇಳೆ ಮಾತನಾಡಿದ ಅವರು, ಅಧಿಕಾರಕಾರದಲ್ಲಿದ್ದಾಗ ಕಾಂಗ್ರೆಸ್ ಭ್ರಷ್ಟಾಚಾರ, ಸಮಯ ವ್ಯರ್ಥ ಮಾಡಿದ್ದೇ ಸಾಧನೆ. ಕೇವಲ ಚಿಕ್ಕಬಳ್ಳಾಪುರ ಒಂದು ಜಿಲ್ಲೆಗೆ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಏನು ಮಾಡಿದ್ದಾರೆ ಅನ್ನುವ ಬಗ್ಗೆ ಮಾತನಾಡಲಿ. ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಈ ಒಂದು ಜಿಲ್ಲೆಯಲ್ಲೇ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. 3124 ಜನಕ್ಕೆ ಪಿಎಂ ಆವಾಸ್ ಯೋಜನೆ ಅಡಿ ಮನೆಗಳು ಸಿಕ್ಕಿವೆ. ಪಿಎಂ ಕಿಸಾನ್ ಯೋಜನೆಯಡಿ 1 ಲಕ್ಷ 19 ಸಾವಿರಕ್ಕೂ ಅಧಿಕ ಜನರ ಅವರ ಅಕೌಂಟ್‌ಗೆ ಪ್ರತಿ ವರ್ಷ 10 ಸಾವಿರ ರೂ. ನೇರ ಪಾವತಿಯಾಗುತ್ತಿದೆ. ಪಿಎಂ ಮಾತೃತ್ವ ಬಂಧನ ಯೋಜನೆಯ ಲಾಭ 72,000 ಜನರಿಗೆ ಸಿಗುತ್ತಿದೆ. ಈ ಜಿಲ್ಲೆಯ 52,160 ಹಿರಿಯರಿಗೆ ಮಾಶಾಸನ ಸಿಗುತ್ತಿದೆ ಎಂದರು.