ಪೊಕ್ಸೋ ತಡೆ, ಬಾಲ್ಯ ವಿವಾಹ ನಿಷೇಧ ಅನುಷ್ಟಾನದಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಿದೆ. ಮಹಾವೀರ ಮ.ಕರಣ್ಣವರ

ದಾವಣಗೆರೆ:  ಪೊಕ್ಸೋ ಕಾನೂನು ಉಲ್ಲಂಘನೆ ತಡೆ ಮತ್ತು ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯವಾದದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರು ತಿಳಿಸಿದರು.

ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೋಕ್ಸೋ ತಡೆ ಸಮಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಶಿಕ್ಷಣ ಇಲಾಖೆ ಇವರ ಸಹಯೋಗದೊಂದಿಗೆ ದಾವಣಗೆರೆ ತಾಲೂಕಿನ ಶಾಲಾ ಶಿಕ್ಷಕಿಯರಿಗಾಗಿ ನಗರದ ಗುರುಭವನದಲ್ಲಿ ಏರ್ಪಡಿಸಲಾದ ಒಂದು ದಿನದ ಕಾರ್ಯಗಾರ ಮತ್ತು ಕಾನೂನಿನ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದರು. ಇತ್ತೀಚಿನ ದಿನಗಳಲ್ಲಿ ವರದಿಯಾಗುತ್ತಿರುವ ಪೆÇೀಕ್ಸೋ ಪ್ರಕರಣಗಳನ್ನು ತಡೆಯುವಲ್ಲಿ ಮತ್ತು ಬಾಲ್ಯ ವಿವಾಹಗಳನ್ನು ತಡೆಯುವಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಿದೆ ಎಂದು ಮನವರಿಕೆ ಮಾಡಿದರು. ಶಿಕ್ಷಕರಾದವರು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಕೇವಲ ಪಠ್ಯಕ್ಕೆ ಸಂಬಂಧಿಸಿದ ಪಾಠಕ್ಕೆ ಸೀಮಿತವಾಗದೇ ಪಠ್ಯೇತರ ವಿಷಯಗಳ ಮಾಹಿತಿಗಳನ್ನು ಸಹ ವಿದ್ಯಾರ್ಥಿಗಳಿಗೆ ತಿಳಿಸಬೇಕೆಂದರು. ಯಾವುದೇ ಒಬ್ಬ ವ್ಯಕ್ತಿಯ ಜೀವನದಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದ್ದು ಇದು ಜೀವನದ್ದಕ್ಕೂ ನಡೆಯಬೇಕೆಂದು ತಿಳಿಸಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ ಮಾತಾನಾಡಿ ಸಮಾಜದಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪೆÇೀಷಣಾ ಕಾರ್ಯದಲ್ಲಿ ಎಲ್ಲರದೂ ಬಹುದೊಡ್ಡ ಜವಾಬ್ದಾರಿ ಇದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಪ್ರಕಾಶ್ ಇವರು ಮಹಿಳೆಯರು, ಮಕ್ಕಳಿಗಾಗಿ ಇರುವ ಕಾನೂನುಗಳ ಬಗ್ಗೆ ಮತ್ತು ವಿವಿಧ ಇಲಾಖೆಗಳ ಸಮನ್ವಯತೆಯ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ಕಾರ್ಯಕ್ರಮವನ್ನು ಆಯೋಜಿಸಿ ಇಲಾಖೆಯ ಪರವಾಗಿ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿಗಳನ್ನು ನೀಡಿದರು.

Leave a Reply

Your email address will not be published. Required fields are marked *

error: Content is protected !!