ರಾಜ್ಯ ಸುದ್ದಿ

ಹಿಂದಿನ ಸರ್ಕಾರದ ಎಲ್ಲಾ ಕಾಮಗಾರಿಗಳಿಗೆ ತಡೆ – ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ

ಹಿಂದಿನ ಸರ್ಕಾರದ ಎಲ್ಲಾ ಕಾಮಗಾರಿಗಳಿಗೆ ತಡೆ - ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳು/ ನಿಗಮಗಳು/ ಮಂಡಳಿ/ ಪ್ರಾಧಿಕಾರಗಳ ಹಿಂದಿನ ಕಾಮಗಾರಿಗಳನ್ನು ತಡೆಹಿಡಿಯುವ ಬಗ್ಗೆ ಸುತ್ತೋಲೆ ಹೊರಡಿಸಿದೆ.

ಸೋಮವಾರ ಹೊರಡಿಸಿರುವ ಸುತ್ತೋಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ನಿರ್ದೇಶನದಂತೆ, ಈ ಹಿಂದಿನ ಸರ್ಕಾರ ಕೈಗೊಂಡಿದ್ದ ಎಲ್ಲಾ ಇಲಾಖೆಗಳ ಹಾಗೂ ಇಲಾಖೆಗಳ ಅಧೀನಕ್ಕೊಳಪಡುವ ನಿಗಮ/ ಮಂಡಳಿ/ ಪ್ರಾಧಿಕಾರಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಎಲ್ಲಾ ಮುಂದಿನ ಹಣ ಬಿಡುಗಡೆ/ ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲು ಹಾಗೂ ಪ್ರಾರಂಭವಾಗದಿರುವ ಎಲ್ಲಾ ಕಾಮಗಾರಿಗಳನ್ನು ಸಹ ತಡೆ ಹಿಡಿಯಲು ತಿಳಿಸಲಾಗಿದೆ ಎಂದು ಹೇಳಿದೆ.

ಈ ಸುತ್ತೋಲೆ ಪ್ರತಿ ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ/ ಕಾರ್ಯದರ್ಶಿಗಳು, ಆಯುಕ್ತರು, ಖಜಾನೆ ಆಯುಕ್ತಾಲಯ, 6ನೇ ಮಹಡಿ, ಕೆ. ಪಿ. ಸಿ. ಎಲ್, ಗ್ರೀನ್ ಬಿಲ್ಡಿಂಗ್, ಔಷಧ ನಿಯಂತ್ರಣ ಕಛೇರಿ ಕಟ್ಟಡದ ಆವರಣ, ಅರಮನೆ ರಸ್ತೆ, ಬೆಂಗಳೂರು-1 ಇವರಿಗೆ ಕಳಿಸಲಾಗಿದೆ. ಅಲ್ಲದೇ ಎಲ್ಲಾ ಇಲಾಖಾ ಮುಖ್ಯಸ್ಥರುಗಳು, ರಾಜ್ಯದ ಎಲ್ಲಾ ನಿಗಮ/ ಮಂಡಳಿ/ ಪ್ರಾಧಿಕಾರಗಳು, ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು/ ಮುಖ್ಯ ಲೆಕ್ಕಾಧಿಕಾರಿಗಳು, ಆರ್ಥಿಕ ಇಲಾಖೆಯ ಅಪರ/ ಜಂಟಿ/ ಉಪ ಕಾರ್ಯದರ್ಶಿಗಳು ಮತ್ತು ಶಾಖಾ ರಕ್ಷಾ ಕಡತ/ ಹೆಚ್ಚುವರಿ ಪ್ರತಿಗಳು ಇವರಿಗೆ ರವಾನೆ ಮಾಡಲಾಗಿದೆ.

Click to comment

Leave a Reply

Your email address will not be published. Required fields are marked *

Most Popular

To Top